ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ʻಜಲ ಜೀವನ್ ಮಿಷನ್ʼ ಅಡಿಯಲ್ಲಿ 11 ಕೋಟಿ ನಲ್ಲಿ ನೀರಿನ ಸಂಪರ್ಕಗಳ ಸಾಧನೆಯನ್ನು ಶ್ಲಾಘಿಸಿದ ಪ್ರಧಾನಿ

Posted On: 25 JAN 2023 11:51AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, `ಜಲ ಜೀವನ್ ಮಿಷನ್’ ಅಡಿಯಲ್ಲಿ 11 ಕೋಟಿ ನಲ್ಲಿ ನೀರಿನ ಸಂಪರ್ಕಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ ಈ ಉಪಕ್ರಮದಿಂದ ಪ್ರಯೋಜನ ಪಡೆದ ಎಲ್ಲರಿಗೂ . ಶ್ರೀ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ ಮತ್ತು ಈ ಯೋಜನೆಯನ್ನು ಯಶಸ್ವಿಗೊಳಿಸಲು ತಳಮಟ್ಟದಲ್ಲಿ ಶ್ರಮಿಸುತ್ತಿರುವವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಕೇಂದ್ರ ಜಲಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

"ಇದೊಂದು ದೊಡ್ಡ ಸಾಧನೆ. ಭಾರತದ ಜನರಿಗೆ 'ಪ್ರತಿ ಮನೆಗೆ ನೀರುʼ ಖಾತರಿಪಡಿಸಲು ನಡೆದ ವ್ಯಾಪಕ ಕೆಲಸವನ್ನು ಇದು ಸೂಚಿಸುತ್ತದೆ. ಈ ಉಪಕ್ರಮದಿಂದ ಪ್ರಯೋಜನ ಪಡೆದ ಎಲ್ಲರಿಗೂ ಅಭಿನಂದನೆಗಳು ಮತ್ತು ಈ ಯೋಜನೆ ಯಶಸ್ವಿಗೊಳಿಸಲು ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವವರಿಗೂ ಅಭಿನಂದನೆಗಳು.“

********


(Release ID: 1893594) Visitor Counter : 172