ಪ್ರಧಾನ ಮಂತ್ರಿಯವರ ಕಛೇರಿ
ಮಹಾತ್ಮಾ ಗಾಂಧಿ ಅವರ ಪುಣ್ಯ ತಿಥಿಯಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಿ
ರಾಷ್ಟ್ರದ ಸೇವೆಯಲ್ಲಿ ಹುತಾತ್ಮರಾದವರೆಲ್ಲರಿಗೂ ಸಹ ಪ್ರಧಾನಮಂತ್ರಿಯವರು ಗೌರವ ನಮನ ಸಲ್ಲಿಸಿದರು
प्रविष्टि तिथि:
30 JAN 2023 9:08AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಅವರ ಆಳವಾದ ಚಿಂತನೆಗಳನ್ನು ಸ್ಮರಿಸಿದರು. ಶ್ರೀ ಮೋದಿ ಅವರು ನಮ್ಮ ರಾಷ್ಟ್ರದ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ಸಹ ಗೌರವ ನಮನ ಸಲ್ಲಿಸಿದರು.
ಈ ಕುರಿತು ಪ್ರಧಾನಿ ಹೀಗೆ ಟ್ಟೀಟ್ ಮಾಡಿದ್ದಾರೆ:
"ಬಾಪೂ ಅವರ ಪುಣ್ಯ ತಿಥಿಯಂದು ಅವರಿಗೆ ನಾನು ನಮಿಸುತ್ತೇನೆ ಮತ್ತು ಅವರ ಆಳವಾದ ಆಲೋಚನೆಗಳನ್ನು ನೆನಪಿಸಿಕೊಳ್ಳುತ್ತೇನೆ. ನಮ್ಮ ರಾಷ್ಟ್ರದ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ಸಹ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗ ಅವಿಸ್ಮರಣೀಯ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಕೆಲಸ ಮಾಡುವ ನಮ್ಮ ಸಂಕಲ್ಪವನ್ನು ಅದು ಬಲಪಡಿಸುತ್ತದೆ."
*******
(रिलीज़ आईडी: 1894652)
आगंतुक पटल : 173
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam