ಪ್ರಧಾನ ಮಂತ್ರಿಯವರ ಕಛೇರಿ

​​​​​​​ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ಅಗ್ನಿ ಅನಾಹುತದಲ್ಲಿ  ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ


​​​​​​​ಪಿ ಎಂ ಎನ್ ಆರ್ ಎಫ್  ದಿಂದ ಹೆಚ್ಚುವರಿ ಅನುದಾನವನ್ನು ಘೋಷಿಸಲಾಗುತ್ತಿದೆ

Posted On: 31 JAN 2023 11:45PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ಸಂಭವಿಸಿದ  ಅಗ್ನಿ ಅನಾಹುತದಲ್ಲಿ ಜೀವ ಕಳೆದುಕೊಂಡವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

‘ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ’ (PMNRF) ಪ್ರಧಾನಮಂತ್ರಿಯವರು ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಹೆಚ್ಚುವರಿ ಪರಿಹಾರವನ್ನು ಘೋಷಿಸಿದ್ದಾರೆ

ಪ್ರಧಾನಮಂತ್ರಿಯವರ ಕಚೇರಿ ಹೀಗೆ ಟ್ವೀಟ್ ಮಾಡಿದೆ;

 “ಧನ್‌ಬಾದ್‌ನ ಅಗ್ನಿ ದುರಂತದಲ್ಲಿ ಆದ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಬಗ್ಗೆ ಕಾಳಜಿಯಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ”

 “ಧನ್‌ಬಾದ್‌ನಲ್ಲಿ ಅಗ್ನಿ ದುರಂತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬದ ಸದಸ್ಯರಿಗೆ  PMNRF ನಿಂದ ರೂ. 2 ಲಕ್ಷ ಗಾಯಾಳುಗಳಿಗೆ ರೂ. 50,000 ಹೆಚ್ಚುವರಿ ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ@narendramodi"

*******(Release ID: 1895274) Visitor Counter : 123