ಬಾಹ್ಯಾಕಾಶ ವಿಭಾಗ
azadi ka amrit mahotsav

ಭವಿಷ್ಯದ ಬಾಹ್ಯಾಕಾಶ ಪ್ರವಾಸೋದ್ಯಮಕ್ಕಾಗಿ ಸ್ವದೇಶದಲ್ಲಿಯೇ ಸಾಮರ್ಥ್ಯವನ್ನು ಹೆಚ್ಚಿಸಲು ಸರ್ಕಾರವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ತಿಳಿಸಿದರು.


ಉಪ ಕಕ್ಷೆಯ ಬಾಹ್ಯಾಕಾಶ ಪ್ರವಾಸೋದ್ಯಮ ಮಿಷನ್ಗಾಗಿ ಅಗತ್ಯವಿರುವ ಲಿಕ್ವಿಡ್ ಪ್ರೊಪೆಲ್ಲಂಟ್ ಸ್ಟೇಜ್ ಬೂಸ್ಟರ್ ಗಾಗಿ ಇಸ್ರೋ ಕೆಲವು ಕಾರ್ಯಸಾಧ್ಯತೆಯ ಅಧ್ಯಯನಗಳನ್ನು ಸಹ ನಡೆಸಿದೆ.

प्रविष्टि तिथि: 02 FEB 2023 5:58PM by PIB Bengaluru

ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರ ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ); ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ) ಭೂ ವಿಜ್ಞಾನ; ಎಂಒಎಸ್ ಪಿಎಂಒ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಪಿಂಚಣಿಗಳು, ಅಣುಶಕ್ತಿ ಮತ್ತು ಬಾಹ್ಯಾಕಾಶ  ಸಚಿವರಾದ ಡಾ ಜಿತೇಂದ್ರ ಸಿಂಗ್ ಅವರು ಇಂದು ಭವಿಷ್ಯದ ಬಾಹ್ಯಾಕಾಶ ಪ್ರವಾಸೋದ್ಯಮಕ್ಕಾಗಿ ಸ್ವದೇಶದಲ್ಲಿಯೇ ಸಾಮರ್ಥ್ಯವನ್ನು ಹೆಚ್ಚಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಡಾ ಜಿತೇಂದ್ರ ಸಿಂಗ್, ಉಪ ಕಕ್ಷೆಯ ಬಾಹ್ಯಾಕಾಶ ಪ್ರವಾಸೋದ್ಯಮ ಮಿಷನ್ನಿಗಾಗಿ ಬೇಕಾದ ಲಿಕ್ವಿಡ್ ಪ್ರೊಪೆಲ್ಲೆಂಟ್ ಸ್ಟೇಜ್ ಬೂಸ್ಟರ್ ಗಾಗಿ ಇಸ್ರೋ ಕೆಲವು ಕಾರ್ಯಸಾಧ್ಯತೆಯ ಅಧ್ಯಯನಗಳನ್ನು ಸಹ ನಡೆಸಿದೆ.

ಭಾರತದ ಚೊಚ್ಚಲ ಮಾನವ ಬಾಹ್ಯಾಕಾಶ ಯಾನ ಕಾರ್ಯಕ್ರಮವಾದ ಗಗನ ಯಾನ್ ಮೂಲಕ ಇಸ್ರೋ ವಿವಿಧ ತಂತ್ರಜ್ಞಾನಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ, ಇದು ಮಾನವ ಬಾಹ್ಯಾಕಾಶ ಕಾರ್ಯಾಚರಣೆಗಳಿಗೆ ಅಗತ್ಯವಾದ  ನಿರ್ಮಾಣ ಸಾಮಗ್ರಿಗಳಾಗಿವೆ ಎಂದು ಡಾ ಜಿತೇಂದ್ರ ಸಿಂಗ್ ಹೇಳಿದರು.

ಭೂಮಿಯ ಕೆಳ ಕಕ್ಷೆಯಲ್ಲಿ ಮಾನವ ಬಾಹ್ಯಾಕಾಶ ಯಾನದ ಸಾಮರ್ಥ್ಯವನ್ನು ಪ್ರದರ್ಶಿಸುವುದು ಗಗನ ಯಾನ್  ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಗಗನ ಯಾನ್ ಮಿಷನ್ ನ ನಂತರ ಭವಿಷ್ಯದ ಕಾರ್ಯಾಚರಣೆಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

*****


(रिलीज़ आईडी: 1896040) आगंतुक पटल : 208
इस विज्ञप्ति को इन भाषाओं में पढ़ें: English , Urdu