ಪ್ರಧಾನ ಮಂತ್ರಿಯವರ ಕಛೇರಿ
ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
Posted On:
06 FEB 2023 12:00PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಆಸ್ತಿಪಾಸ್ತಿ ಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಟರ್ಕಿ ಅಧ್ಯಕ್ಷರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ;
"ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿಯಿಂದ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಭಾರತವು ಟರ್ಕಿಯ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ ಮತ್ತು ಈ ದುರಂತವನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ರೀತಿಯ ಸಹಾಯವನ್ನು ನೀಡಲು ಸಿದ್ಧವಾಗಿದೆ,’’ ಎಂದು ಹೇಳಿದ್ದಾರೆ.
***
(Release ID: 1896593)
Visitor Counter : 169
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam