ಪ್ರಧಾನ ಮಂತ್ರಿಯವರ ಕಛೇರಿ
ಸಿರಿಯಾದಲ್ಲಿ ಭೂಕಂಪನದಿಂದ ಉಂಟಾದ ಜೀವ ಹಾನಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
06 FEB 2023 3:32PM by PIB Bengaluru
ಸಿರಿಯಾದಲ್ಲಿ ಭೂಕಂಪನದಿಂದ ಉಂಟಾದ ಜೀವ ಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸಿರಿಯಾದ ಜನರ ದುಃಖವನ್ನು ನಾವು ಹಂಚಿಕೊಳ್ಳುತ್ತಿದ್ದೇವೆ ಮತ್ತು ಸಂಕಷ್ಟ ಸಮಯದಲ್ಲಿ ನೆರವು ಹಾಗೂ ಬೆಂಬಲ ನೀಡಲು ಬದ್ಧವಾಗಿದ್ದೇವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿಯವರು:
“ವಿನಾಶಕಾರಿ ಭೂಕಂಪ ಸಿರಿಯಾದ ಜನರ ಮೇಲೆ ಪರಿಣಾಮ ಬೀರಿದೆ ಎಂದು ತಿಳಿದು ನೋವಾಗಿದೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ಪ್ರಾಮಾಣಿಕ ಸಂತಾಪಗಳು. ಸಿರಿಯಾದ ಜನರ ದುಃಖವನ್ನು ನಾವು ಹಂಚಿಕೊಳ್ಳುತ್ತಿದ್ದೇವೆ ಮತ್ತು ಸಂಕಷ್ಟದಲ್ಲಿ ನೆರವು ಹಾಗೂ ಬೆಂಬಲ ನೀಡಲು ಬದ್ಧರಾಗಿದ್ದೇವೆ” ಎಂದು ಹೇಳಿದ್ದಾರೆ.
*****
(ಪ್ರಕಟಣೆ ಐ.ಡಿ.: 1896659)
ವಿಸಿಟರ್ ಕೌಂಟರ್ : 224
ಪ್ರಕಟಣೆಯನ್ನು ಇದರಲ್ಲಿ ಓದಿ:
Bengali
,
English
,
Urdu
,
हिन्दी
,
Marathi
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam