ಪ್ರಧಾನ ಮಂತ್ರಿಯವರ ಕಛೇರಿ

ಫೆಬ್ರವರಿ 12 ರಂದು ರಾಜಸ್ತಾನ ಮತ್ತು ಫೆಬ್ರವರಿ 13 ರಂದು ಕರ್ನಾಟಕಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ


​​​​​​​ರಾಜಸ್ಥಾನದ ದೌಸಾದಲ್ಲಿ 18,100 ಕೋಟಿ ರೂ.ಗೂ ಅಧಿಕ ಮೌಲ್ಯದ ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ

ಪ್ರಧಾನಿ ಅವರಿಂದ ರಾಷ್ಟ್ರಕ್ಕೆ ಸಮರ್ಪಿತವಾಗಲಿರುವ ದೆಹಲಿ-ದೌಸಾ-ಲಾಲ್ಸೋಟ್ ವಿಭಾಗವು ದೆಹಲಿಯಿಂದ ಜೈಪುರಕ್ಕೆ ಪ್ರಯಾಣದ ಸಮಯವನ್ನು ಸುಮಾರು 5 ಗಂಟೆಗಳಿಂದ ಸುಮಾರು 3.5 ಗಂಟೆಗಳಿಗೆ ಇಳಿಸಲಿದೆ.

ಏರೋ ಇಂಡಿಯಾ 2023 ರ 14 ನೇ ಆವೃತ್ತಿಯನ್ನು ಬೆಂಗಳೂರಿನಲ್ಲಿ ಉದ್ಘಾಟಿಸಲಿರುವ ಪ್ರಧಾನಮಂತ್ರಿ

ಏರೋ ಇಂಡಿಯಾ 2023 ದೇಶೀಯ ಉಪಕರಣಗಳು / ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಮತ್ತು ವಿದೇಶಿ ಕಂಪನಿಗಳೊಂದಿಗೆ ಪಾಲುದಾರಿಕೆಯನ್ನು ರೂಪಿಸಲು ಗಮನ ಹರಿಸುತ್ತದೆ - ಇದು ಪ್ರಧಾನಮಂತ್ರಿ ಅವರ 'ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್' ದೃಷ್ಟಿಕೋನಕ್ಕೆ ಅನುಗುಣವಾಗಿದೆ

Posted On: 11 FEB 2023 10:14AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 12 ರಂದು ರಾಜಸ್ಥಾನ ಮತ್ತು ಫೆಬ್ರವರಿ 13 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ಫೆಬ್ರವರಿ 12 ರಂದು ಮಧ್ಯಾಹ್ನ 3 ಗಂಟೆಗೆ ಅವರು ದೌಸಾ ತಲುಪಲಿದ್ದು, 18,100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಫೆಬ್ರವರಿ 13ರಂದು ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 2023ರ 14ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.

ದೌಸಾದಲ್ಲಿ ಪ್ರಧಾನ ಮಂತ್ರಿ

ನವ ಭಾರತದಲ್ಲಿ ಬೆಳವಣಿಗೆ, ಅಭಿವೃದ್ಧಿ ಮತ್ತು ಸಂಪರ್ಕದ ಎಂಜಿನ್ ಆಗಿ ಅತ್ಯುತ್ತಮ ರಸ್ತೆ ಮೂಲಸೌಕರ್ಯವನ್ನು ನಿರ್ಮಿಸಲು ಪ್ರಧಾನಮಂತ್ರಿ ಅವರ ಒತ್ತು ದೇಶಾದ್ಯಂತ ನಡೆಯುತ್ತಿರುವ ಹಲವಾರು ವಿಶ್ವ ದರ್ಜೆಯ ಎಕ್ಸ್ ಪ್ರೆಸ್ ವೇಗಳ ನಿರ್ಮಾಣದಿಂದ ಸಾಕಾರಗೊಳ್ಳುತ್ತಿದೆ. ಅಂತಹ ಒಂದು ಪ್ರಮುಖ ಯೋಜನೆಗಳಲ್ಲಿ ದೆಹಲಿ ಮುಂಬೈ ಎಕ್ಸ್ ಪ್ರೆಸ್ ವೇ ಕೂಡ ಒಂದಾಗಿದೆ. ಇದರ ಮೊದಲ ಪೂರ್ಣಗೊಂಡ ಭಾಗವಾದ ದೆಹಲಿ - ದೌಸಾ - ಲಾಲ್ಸೋಟ್ ಅನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ದೆಹಲಿ-ದೌಸಾ-ಲಾಲ್ಸೋಟ್ ನಡುವಿನ 246 ಕಿ.ಮೀ ಉದ್ದದ ದೆಹಲಿ-ದೌಸಾ-ಲಾಲ್ಸೋಟ್ ವಿಭಾಗವನ್ನು 12,150 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ವಿಭಾಗದ ಈ ಕಾರ್ಯಾಚರಣೆಯು ದೆಹಲಿಯಿಂದ ಜೈಪುರಕ್ಕೆ ಪ್ರಯಾಣದ ಸಮಯವನ್ನು 5 ಗಂಟೆಗಳಿಂದ ಸುಮಾರು 3.5 ಗಂಟೆಗಳಿಗೆ ಇಳಿಸುತ್ತದೆ ಮತ್ತು ಇಡೀ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಉತ್ತೇಜನವನ್ನು ನೀಡುತ್ತದೆ.

1,386 ಕಿ.ಮೀ ಉದ್ದದ ದೆಹಲಿ ಮುಂಬೈ ಎಕ್ಸ್ ಪ್ರೆಸ್ ವೇ ಭಾರತದ ಅತಿ ಉದ್ದದ ಎಕ್ಸ್ ಪ್ರೆಸ್ ವೇಯಾಗಲಿದೆ. ಇದು ದೆಹಲಿ ಮತ್ತು ಮುಂಬೈ ನಡುವಿನ ಪ್ರಯಾಣದ ದೂರವನ್ನು 1,424 ಕಿ.ಮೀ.ನಿಂದ 1,242 ಕಿ.ಮೀ.ಗೆ ಅಂದರೆ ಶೇ. 12 ರಷ್ಟು ಕಡಿಮೆ ಮಾಡುತ್ತದೆ ಮತ್ತು ಪ್ರಯಾಣದ ಸಮಯವನ್ನು 24 ಗಂಟೆಗಳಿಂದ 12 ಗಂಟೆಗೆ ಶೇ. 50 ರಷ್ಟು ತಗ್ಗಿಸುತ್ತದೆ. ಇದು ದೆಹಲಿ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಮೂಲಕ ಹಾದುಹೋಗುತ್ತದೆ ಮತ್ತು ಕೋಟಾ, ಇಂದೋರ್, ಜೈಪುರ, ಭೋಪಾಲ್, ವಡೋದರಾ ಮತ್ತು ಸೂರತ್ ನಂತಹ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ. ಎಕ್ಸ್ ಪ್ರೆಸ್ ವೇ  93 ಪಿಎಂ ಗತಿ ಶಕ್ತಿ ಆರ್ಥಿಕ ಜಾಲಘಟ್ಟ ಳು, 13 ಬಂದರುಗಳು, 8 ಪ್ರಮುಖ ವಿಮಾನ ನಿಲ್ದಾಣಗಳು ಮತ್ತು 8 ಬಹು-ಮಾದರಿ ಲಾಜಿಸ್ಟಿಕ್ಸ್ ಪಾರ್ಕ್ ಗಳು (ಎಂಎಂಎಲ್ ಪಿ) ಜತೆಗೆ ಮುಂಬರುವ ಹೊಸ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಗಳಾದ ಜೆವರ್ ವಿಮಾನ ನಿಲ್ದಾಣ, ನವೀ ಮುಂಬೈ ವಿಮಾನ ನಿಲ್ದಾಣ ಮತ್ತು ಜೆಎನ್ ಪಿಟಿ ಬಂದರಿಗೆ ಸೇವೆ ಸಲ್ಲಿಸಲಿದೆ. ಎಕ್ಸ್ ಪ್ರೆಸ್ ವೇ ಎಲ್ಲಾ ನೆರೆಹೊರೆಯ ಪ್ರದೇಶಗಳ ಅಭಿವೃದ್ಧಿ ಪಥದಲ್ಲಿ ವೇಗವರ್ಧಕ ಪರಿಣಾಮವನ್ನು ಬೀರುತ್ತದೆ. ಇದರಿಂದಾಗಿ ದೇಶದ ಆರ್ಥಿಕ ರೂಪಾಂತರದಲ್ಲಿ ಪ್ರಮುಖ ರೀತಿಯಲ್ಲಿ ಕೊಡುಗೆ ನೀಡುತ್ತದೆ.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು 5940 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿರುವ 247 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಂಡಿಕುಯಿಯಿಂದ ಜೈಪುರದವರೆಗಿನ 67 ಕಿ.ಮೀ ಉದ್ದದ ಚತುಷ್ಪಥ ರಸ್ತೆಯನ್ನು 2000 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು, ಸುಮಾರು 3775 ಕೋಟಿ ರೂ.ಗಳ ವೆಚ್ಚದಲ್ಲಿ ಕೊಟ್ಪುಟ್ಲಿಯಿಂದ ಬರೋಡಾನಿಯೊವರೆಗಿನ ಆರು ಪಥದ ವೇಗದ ರಸ್ತೆ ಮತ್ತು ಸುಮಾರು 150 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಲಾಲ್ಸೋಟ್-ಕರೋಲಿ ವಿಭಾಗದ ಎರಡು ಪಥದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಪ್ರಧಾನ ಮಂತ್ರಿ

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 2023 ರ 14 ನೇ ಆವೃತ್ತಿಯನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ. ಏರೋ ಇಂಡಿಯಾ 2023 ರ ಘೋಷವಾಕ್ಯವು "ದಿ ರನ್ ವೇ ಟು ಎ ಬಿಲಿಯನ್ ಆಪರ್ಚುನಿಟೀಸ್" ಎಂಬುದಾಗಿದೆ.

ಪ್ರಧಾನಮಂತ್ರಿಯವರ 'ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್' ದೃಷ್ಟಿಕೋನಕ್ಕೆ ಅನುಗುಣವಾಗಿ, ಈ ಕಾರ್ಯಕ್ರಮವು ದೇಶೀಯ ಉಪಕರಣಗಳು / ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಮತ್ತು ವಿದೇಶಿ ಕಂಪನಿಗಳೊಂದಿಗೆ ಸಹಭಾಗಿತ್ವವನ್ನು ರೂಪಿಸುವತ್ತ ಗಮನ ಹರಿಸುತ್ತದೆ. ವಿನ್ಯಾಸ ನಾಯಕತ್ವ, ಯುಎವಿ ವಲಯದ ಬೆಳವಣಿಗೆ, ರಕ್ಷಣಾ ಬಾಹ್ಯಾಕಾಶ ಮತ್ತು ಭವಿಷ್ಯದ ತಂತ್ರಜ್ಞಾನಗಳಲ್ಲಿ ದೇಶದ ಪ್ರಗತಿಯನ್ನು ಈ ಕಾರ್ಯಕ್ರಮವು ಪ್ರದರ್ಶಿಸುವುದರಿಂದ ಭಾರತೀಯ ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆಗೆ ಪ್ರಧಾನ ಮಂತ್ರಿ ಅವರ ಒತ್ತು ಪ್ರದರ್ಶಿಸಲಾಗುವುದು. ಇದಲ್ಲದೆ, ಈ ಕಾರ್ಯಕ್ರಮವು ಲಘು ಯುದ್ಧ ವಿಮಾನ (ಎಲ್ ಸಿಎ) -ತೇಜಸ್, ಎಚ್ ಟಿಟಿ -40, ಡಾರ್ನಿಯರ್ ಲೈಟ್ ಯುಟಿಲಿಟಿ ಹೆಲಿಕಾಪ್ಟರ್ (ಎಲ್ ಯುಎಚ್), ಲೈಟ್ ಕಾಂಬ್ಯಾಟ್ ಹೆಲಿಕಾಪ್ಟರ್ (ಎಲ್ ಸಿಎಚ್) ಮತ್ತು ಆಧುನಿಕ ಲೈಟ್ ಹೆಲಿಕಾಪ್ಟರ್ (ಎಎಲ್ಎಚ್) ನಂತಹ ದೇಶೀಯ ವಾಯು ಪ್ಲಾಟ್ ಫಾರ್ಮ್ ಗಳ ರಫ್ತನ್ನು ಉತ್ತೇಜಿಸುತ್ತದೆ. ಜಾಗತಿಕ ಪೂರೈಕೆ ಸರಪಳಿಯಲ್ಲಿ ದೇಶೀಯ ಎಂಎಸ್ಎಂಇಗಳು ಮತ್ತು ನವೋದ್ಯಮಗಳನ್ನು ಸಂಯೋಜಿಸಲು ಮತ್ತು ಸಹ-ಅಭಿವೃದ್ಧಿ ಮತ್ತು ಸಹ-ಉತ್ಪಾದನೆಗಾಗಿ ಪಾಲುದಾರಿಕೆ ಸೇರಿದಂತೆ ವಿದೇಶಿ ಹೂಡಿಕೆಗಳನ್ನು ಆಕರ್ಷಿಸಲು ಈ ಕಾರ್ಯಕ್ರಮವು ಸಹಾಯ ಮಾಡುತ್ತದೆ.

ಏರೋ ಇಂಡಿಯಾ 2023 ರಲ್ಲಿ 80 ಕ್ಕೂ ಹೆಚ್ಚು ದೇಶಗಳು ಭಾಗವಹಿಸಲಿವೆ. ಏರೋ ಇಂಡಿಯಾ 2023 ರಲ್ಲಿ ಸುಮಾರು 30 ದೇಶಗಳ ಸಚಿವರು ಮತ್ತು ಜಾಗತಿಕ ಮತ್ತು ಭಾರತೀಯ ಒಇಎಂಗಳ 65 ಸಿಇಒಗಳು ಭಾಗವಹಿಸುವ ಸಾಧ್ಯತೆಯಿದೆ.

ಏರೋ ಇಂಡಿಯಾ 2023 ಪ್ರದರ್ಶನದಲ್ಲಿ ಸುಮಾರು 100 ವಿದೇಶಿ ಮತ್ತು 700 ಭಾರತೀಯ ಕಂಪನಿಗಳು ಸೇರಿದಂತೆ 800 ಕ್ಕೂ ಹೆಚ್ಚು ರಕ್ಷಣಾ ಕಂಪನಿಗಳು ಭಾಗವಹಿಸಲಿವೆ. ಪ್ರದರ್ಶನದಲ್ಲಿ ಭಾಗವಹಿಸುವ ಭಾರತೀಯ ಕಂಪನಿಗಳಲ್ಲಿ ಎಂಎಸ್ಎಂಇಗಳು ಮತ್ತು ನವೋದ್ಯಮಗಳು ಸೇರಿವೆ, ಇದು ದೇಶದಲ್ಲಿ ಪ್ರಮುಖ ತಂತ್ರಜ್ಞಾನಗಳ ಪ್ರಗತಿ, ಏರೋಸ್ಪೇಸ್ ಮತ್ತು ರಕ್ಷಣಾ ಸಾಮರ್ಥ್ಯಗಳ ಬೆಳವಣಿಗೆಯನ್ನು ಪ್ರದರ್ಶಿಸುತ್ತದೆ. ಏರೋ ಇಂಡಿಯಾ 2023 ರಲ್ಲಿ ಏರ್ಬಸ್, ಬೋಯಿಂಗ್, ಡಸಾಲ್ಟ್ ಏವಿಯೇಷನ್, ಲಾಕ್ಹೀಡ್ ಮಾರ್ಟಿನ್, ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರಿ, ಬ್ರಹ್ಮೋಸ್ ಏರೋಸ್ಪೇಸ್, ಆರ್ಮಿ ಏವಿಯೇಷನ್, ಎಚ್ ಸಿ ರೊಬೊಟಿಕ್ಸ್, ಸಾಬ್, ಸಫ್ರಾನ್, ರೋಲ್ಸ್ ರಾಯ್ಸ್, ಲಾರ್ಸನ್ ಮತ್ತು ಟೂಬ್ರೊ, ಭಾರತ್ ಫೋರ್ಜ್ ಲಿಮಿಟೆಡ್, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್), ಭಾರತ್ ಡೈನಾಮಿಕ್ಸ್ ಲಿಮಿಟೆಡ್ (ಬಿಡಿಎಲ್) ಮತ್ತು ಬಿಇಎಂಎಲ್ ಲಿಮಿಟೆಡ್ ಸೇರಿವೆ.

*****



(Release ID: 1898404) Visitor Counter : 135