ಪ್ರಧಾನ ಮಂತ್ರಿಯವರ ಕಛೇರಿ

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ 3ನೇ ಖೇಲೋ ಇಂಡಿಯಾ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭ ಕೋರಿದ ಪ್ರಧಾನಿ

Posted On: 11 FEB 2023 9:56AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ 3ನೇ ಖೇಲೋ ಇಂಡಿಯಾ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಛೇರಿಯ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಿಯವರು;

"ಮೂರನೇ ಖೇಲೋ ಇಂಡಿಯಾ ರಾಷ್ಟ್ರೀಯ ಚಳಿಗಾಲದ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಾಶಯಗಳು. ಕ್ರೀಡಾಕೂಟವು ಗುಲ್ಮಾರ್ಗ್ ನ ಸುಂದರವಾದ ಪರಿಸರದಲ್ಲಿ ನಡೆಯುತ್ತಿದೆ. ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಹೆಚ್ಚಿಸುತ್ತದೆ" ಎಂದು ಮರು- ಟ್ವೀಟ್ ಮಾಡಿದ್ದಾರೆ.

******



(Release ID: 1898407) Visitor Counter : 126