ರಾಷ್ಟ್ರಪತಿಗಳ ಕಾರ್ಯಾಲಯ
ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ಭಾರತದ ರಾಷ್ಟ್ರಪತಿಗಳು
Posted On:
13 FEB 2023 12:28PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಫೆಬ್ರವರಿ 13, 2023) ಲಕ್ನೋದಲ್ಲಿ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ವಿಶ್ವವಿದ್ಯಾಲಯದ 10 ನೇ ಘಟಿಕೋತ್ಸವದಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು, ಭಾರತ ಇಂದು ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಯನ್ನು ಹೊಂದಿದೆ ಎಂದು ಹೇಳಿದರು. ಎಲ್ಲಾ ಶಿಕ್ಷಣ ಸಂಸ್ಥೆಗಳು, ವಿಶೇಷವಾಗಿ ವಿಶ್ವವಿದ್ಯಾನಿಲಯಗಳು ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಈ ಪರಿಸರ ವ್ಯವಸ್ಥೆಯ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು ಮತ್ತು ಸಂಶೋಧನೆ ಮತ್ತು ನಾವೀನ್ಯತೆಗೆ ತಮ್ಮ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು. ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ಪ್ರಮುಖ ರಾಷ್ಟ್ರವನ್ನಾಗಿ ಮಾಡುವಲ್ಲಿ ಅವರ ಪ್ರಯತ್ನಗಳು ಪ್ರಮುಖ ಕೊಡುಗೆಯಾಗಬಹುದು ಎಂದು ಅವರು ಹೇಳಿದರು.
ಉತ್ತರಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ-2023 ರ ಮೂಲಕ ಹೂಡಿಕೆ ಮತ್ತು ವ್ಯಾಪಾರ ವೃದ್ಧಿಗೆ ನಿರ್ಮಿಸಲಾದ ಅನುಕೂಲಕರ ವಾತಾವರಣದ ಬಗ್ಗೆ ಒತ್ತಿ ಹೇಳಿದ ರಾಷ್ಟ್ರಪತಿಯವರು ಈ ಅನುಕೂಲಕರ ವಾತಾವರಣದೊಂದಿಗೆ ಶಿಕ್ಷಣವನ್ನು ಸಂಪರ್ಕ ಕೊಂಡಿಯನ್ನು ಬೆಸೆಯುವಂತೆ ಆಗ್ರಹಿಸಿದರು. ಸಾರ್ವಜನಿಕ ಕಲ್ಯಾಣಕ್ಕಾಗಿ ಹೊಸ ಸಂಶೋಧನೆಗಳನ್ನು ಮಾಡುವ ಕೇಂದ್ರವಾಗಿ, ನಾಲ್ಕನೇ ಔದ್ಯೋಗಿಕ ಕ್ರಾಂತಿಯ ಕೇಂದ್ರವಾಗಿ ಮತ್ತು ಸ್ಟಾರ್ಟ್ ಅಪ್ ಗಳ ಮೂಲ ತಾಣವಾಗಿ ನಮ್ಮ ವಿಶ್ವವಿದ್ಯಾನಿಲಯಗಳು ಅಭಿವೃದ್ಧಿ ಹೊಂದಬೇಕು ಎಂದು ಅವರು ಹೇಳಿದರು. ನಮ್ಮ ಶಿಕ್ಷಣ ಸಂಸ್ಥೆಗಳು ಕೂಡ ಹೊಸ ಕ್ರಾಂತಿ, ಸಾಮಾಜಿಕ ಸಮೃದ್ಧಿ ಮತ್ತು ಸಮಾನತೆಯ ಸಂದೇಶವಾಹಕಗಳಾದರೆ ಅದು ತುಂಬಾ ಖೇದಕರ ಎಂದು ಅವರು ಹೇಳಿದರು.
ಬಡವರು ಮತ್ತು ಅವಶ್ಯಕತೆಯಿರುವವರಿಗೆ ಶಿಕ್ಷಣ ನೀಡುವುದು ವಿಶ್ವವಿದ್ಯಾನಿಲಯದ ಮೂಲಭೂತ ಕರ್ತವ್ಯ ಎಂದು ಬಾಬಾಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ನಂಬಿದ್ದರು ಎಂದು ರಾಷ್ಟ್ರಪತಿಯವರು ಹೇಳಿದರು. ಅವರ ಪ್ರಕಾರ ಶಿಕ್ಷಣ ಸಂಸ್ಥೆಗಳು ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕು. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ವಿಶ್ವವಿದ್ಯಾನಿಲಯವು ಹಿಂದುಳಿದ ವರ್ಗ ಮತ್ತು ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ಶೇಕಡಾ 50 ರಷ್ಟು ಮೀಸಲಾತಿ ನೀಡುವ ಮೂಲಕ ಅವರ ಔನ್ನತ್ಯಕ್ಕಾಗಿ ಶ್ಲಾಘನೀಯ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಬಾಬಾಸಾಹೇಬರ ಆದರ್ಶಗಳ ಪ್ರಕಾರ ಈ ವಿಶ್ವವಿದ್ಯಾಲಯವು ದೇಶ ಮತ್ತು ರಾಜ್ಯದಲ್ಲಿ ಶಿಕ್ಷಣ ಪ್ರಸಾರವನ್ನು ಮುಂದುವರಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ಘಟಿಕೋತ್ಸವವು ಬಹಳ ಪ್ರಮುಖ ಸಂದರ್ಭವಾಗಿದೆ ಎಂದು ರಾಷ್ಟ್ರಪತಿಯವರು ಹೇಳಿದರು. ಇಂದಿನ ದಿನ, ಅವರು ವರ್ಷಗಳ ಕಠಿಣ ಪರಿಶ್ರಮದ ಫಲವನ್ನು ಪಡೆಯುತ್ತಾರೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಏನಾಗಬೇಕೆಂದು ಬಯಸುವರೋ ಅದಕ್ಕಾಗಿ ಇಂದಿನಿಂದಲೇ ಶ್ರಮಿಸಬೇಕು ಮತ್ತು ತಮ್ಮ ಗುರಿಯನ್ನು ಕೇವಲ ಮನಸ್ಸಿಗೆ ಮಾತ್ರ ಸೀಮಿತಗೊಳಿಸಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಲು ಈ ಸಂದರ್ಭದಲ್ಲಿ ಬಯಸುತ್ತೇನೆ ಎಂದು ಅವರು ಹೇಳಿದರು. ಕೆಲವು ವಿದ್ಯಾರ್ಥಿಗಳು ಉತ್ತಮ ಶಿಕ್ಷಕರು/ಪ್ರಾಧ್ಯಾಪಕರಾಗಬೇಕೆಂದು ಅವರು ಹಾರೈಸಿದರು. ಶಿಕ್ಷಣ ಮತ್ತು ಬೋಧನೆ ಪರಸ್ಪರ ಸಂಬಂಧ ಹೊಂದಿದೆ ಎಂದು ಅವರು ಹೇಳಿದರು. ಉತ್ತಮ ಶಿಕ್ಷಣ ವ್ಯವಸ್ಥೆಗೆ ಉತ್ತಮ ಶಿಕ್ಷಕರ ಅಗತ್ಯವಿದೆ. ನಮ್ಮ ಭರವಸೆಯ ವಿದ್ಯಾರ್ಥಿಗಳು ಬೋಧನೆಯನ್ನು ವೃತ್ತಿಯಾಗಿ ಅಳವಡಿಸಿಕೊಳ್ಳುವ ಮೂಲಕ ದೇಶದ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ತಮ್ಮ ಅಮೂಲ್ಯ ಕೊಡುಗೆ ನೀಡಬೇಕು ಎಂದು ಹೇಳಿದರು.
ಇಂದು ಪದವಿ ಪಡೆಯುವ ವಿದ್ಯಾರ್ಥಿಗಳು ಶಿಕ್ಷಣ ಮತ್ತು ಜ್ಞಾನದ ಬಲದಿಂದ ಜೀವನದಲ್ಲಿ ಸಾಕಷ್ಟು ಪ್ರಗತಿ ಹೊಂದಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ರಾಷ್ಟ್ರಪತಿಯವರು ಹೇಳಿದರು. ಆದರೆ ಇದರ ಜೊತೆ ಜೊತೆಗೆ, ಅವರು ನಮ್ಮ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು, ಆಗ ಮಾತ್ರ ಅವರು ಅರ್ಥಪೂರ್ಣ ಮತ್ತು ತೃಪ್ತಿಕರ ಜೀವನವನ್ನು ನಡೆಸಬಹುದಾಗಿದೆ. ಎಂದಿಗೂ ಶ್ರೇಷ್ಠತೆಗಾಗಿ ಶ್ರಮಿಸಿ ಎಂದು ಅವರು ಸಲಹೆ ನೀಡಿದರು. ಬಿಕ್ಕಟ್ಟಿನ ಪರಿಸ್ಥಿತಿ ಎದುರಾದಾಗಲೆಲ್ಲಾ ಪರಿಹಾರವನ್ನು ಕಂಡುಕೊಳ್ಳುವ ಬಗ್ಗೆ ಯೋಚಿಸಿ ಮತ್ತು ಅದನ್ನು ಅವಕಾಶವಾಗಿ ಪರಿಗಣಿಸಿ ಎಂದು ಅವರು ಹೇಳಿದರು. ಇದು ಅವರ ವ್ಯಕ್ತಿತ್ವ ವಿಕಸನಕ್ಕೆ ಇಂಬು ನೀಡಲಿದೆ ಎಂದರು.
Please click here to see the President’s speech –
*****
(Release ID: 1898801)
Visitor Counter : 204