ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರೀಯ ಅಂಚೆಚೀಟಿಗಳ ಸಂಗ್ರಹಕ್ಕೆ ಸಂಬಂಧಿಸಿದ ವಸ್ತುಪ್ರದರ್ಶನ ‘ಅಮೃತ್ ಪೆಕ್ಸ್ 2023’ ರಲ್ಲಿ ಶಾಲಾ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು
ಪ್ರಕಟಣಾ ದಿನಾಂಕ:
15 FEB 2023 10:19AM by PIB Bengaluru
ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ಅಂಚೆಚೀಟಿಗಳ ಸಂಗ್ರಹದ ಪ್ರದರ್ಶನ ‘ಅಮೃತ್ ಪೆಕ್ಸ್ 2023’ ರಲ್ಲಿ ಶಾಲಾ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುತ್ತಿರುವ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು ಅಂಚೆಚೀಟಿ ಸಂಗ್ರಹಣೆ ಮತ್ತು ಪತ್ರ ಬರವಣಿಗೆಯಲ್ಲಿ ಮತ್ತಷ್ಟು ಆಸಕ್ತಿಯನ್ನು ಹೆಚ್ಚಿಸಲು ಇದು ಉತ್ತಮ ಮಾರ್ಗವಾಗಿದೆ ಎಂದು ಹೇಳಿದರು.
ಭಾರತೀಯ ಅಂಚೆಯ ಟ್ವೀಟ್ ಥ್ರೆಡ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;
“ಅಂಚೆಚೀಟಿ ಸಂಗ್ರಹಣೆ ಮತ್ತು ಪತ್ರ ಬರವಣಿಗೆಯಲ್ಲಿ ಮತ್ತಷ್ಟು ಆಸಕ್ತಿಯನ್ನು ವೃದ್ಧಿಸುವಲ್ಲಿ ಇದು ಉತ್ತಮ ಮಾರ್ಗವಾಗಿದೆ. ಹೆಚ್ಚೆಚ್ಚು ಯುವಜನತೆ ಈ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಾನು ಭಾವಿಸುತ್ತೇನೆ”.
******
(ಪ್ರಕಟಣೆ ಐ.ಡಿ.: 1899358)
ವಿಸಿಟರ್ ಕೌಂಟರ್ : 227
ಪ್ರಕಟಣೆಯನ್ನು ಇದರಲ್ಲಿ ಓದಿ:
Marathi
,
Tamil
,
English
,
Urdu
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Telugu
,
Malayalam