ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ ಪುರಸ್ಕೃತರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ 

Posted On: 17 FEB 2023 10:31AM by PIB Bengaluru

ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರವನ್ನು ಪಡೆದ ಪ್ರತಿಭಾವಂತ ಯುವಕ-ಯುವತಿಯರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಸಂಗೀತ ನಾಟಕ ಅಕಾಡೆಮಿಯ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ;

"ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ ಪಡೆದ ಪ್ರತಿಭಾವಂತ ಯುವಕ-ಯುವತಿಯರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು. ಈ ಪ್ರತಿಭಾವಂತರು ಮುಂದಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ಸಂಗೀತವನ್ನು ಜನಪ್ರಿಯಗೊಳಿಸಲಿ" ಎಂದು ಹಾರೈಸಿದ್ದಾರೆ.

*****


(Release ID: 1900168) Visitor Counter : 169