ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಎಲ್ಲರಿಗೂ ಮನವಿ ಮಾಡಿದ ಪ್ರಧಾನಮಂತ್ರಿ 

Posted On: 21 FEB 2023 3:42PM by PIB Bengaluru

ಎಲ್ಲರೂ, ವಿಶೇಷವಾಗಿ ಯುವಕರು ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಸ್ಪರ್ಧೆಯನ್ನು ಆಯೋಜಿಸುತ್ತಿದೆ.

ಸ್ಥಳೀಯ ಕಲೆ, ಸಂಸ್ಕೃತಿ ಮತ್ತು ಜೀವನಶೈಲಿಯನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವ ಹಳ್ಳಿಗಳನ್ನು ಗೌರವಿಸುವುದು ಈ ಸ್ಪರ್ಧೆಯ ಮುಖ್ಯ ಗುರಿಯಾಗಿದೆ.

ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಸರಣಿ ಟ್ವೀಟ್ ಗೆ ಸ್ಪಂದಿಸಿದ ಪ್ರಧಾನಮಂತ್ರಿಯವರು, ಈ ರೀತಿ ಟ್ವೀಟ್ ಮಾಡಿದ್ದಾರೆ;

“ಭಾರತದ ಮಹತ್ತರವಾದ ಪ್ರವಾಸೋದ್ಯಮ ಸಾಮರ್ಥ್ಯ, ಅವಕಾಶಗಳನ್ನು ಪ್ರದರ್ಶಿಸುವ ಈ ವಿಶಿಷ್ಟ ಪ್ರಯತ್ನದಲ್ಲಿ ಪಾಲ್ಗೊಳ್ಳುವಂತೆ ನಾನು ನಿಮಗೆಲ್ಲರಿಗೂ, ವಿಶೇಷವಾಗಿ ಯುವಕರಿಗೆ ಮನವಿ ಮಾಡುತ್ತೇನೆ.

https://www.rural.tourism.gov.in/best-rural-village-competition.html”

******(Release ID: 1901106) Visitor Counter : 107