ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸ್ವಚ್ಛತೆಯನ್ನು ಉತ್ತೇಜಿಸಲು ಸೀತಾಪುರದ ಸಂಸದ ರಾಜೇಶ್ ವರ್ಮಾ ಅವರ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಿ

Posted On: 22 FEB 2023 10:11AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲು ಸೀತಾಪುರ (ಉತ್ತರ ಪ್ರದೇಶ) ಲೋಕಸಭಾ ಸದಸ್ಯ ಶ್ರೀ ರಾಜೇಶ್ ವರ್ಮಾ ಅವರು ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

ಸೀತಾಪುರ ಸಂಸದರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:

"ಇದರಿಂದ ಜನರಲ್ಲಿ ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಡಲು ಜಾಗೃತಿ ಹೆಚ್ಚಾಗುತ್ತದೆ ಎಂಬ ವಿಶ್ವಾಸ ನನಗಿದೆ. ಜೊತೆಗೆ, ಸ್ವಚ್ಛತೆಗೆ ಸಂಬಂಧಿಸಿದ ಪ್ರಯತ್ನಗಳಿಗೆ ಜನರಲ್ಲಿ ಪ್ರೇರೇಪಣೆ ದೊರೆಯಲಿದೆ."

******


(Release ID: 1901420) Visitor Counter : 148