ಪ್ರಧಾನ ಮಂತ್ರಿಯವರ ಕಛೇರಿ
ಛತ್ತೀಸ್‌ಗಢದ ಬಲೋದಬಜಾರ್-ಭಟಪರಾ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ
ಮೃತರ ಕುಟುಂಬಸ್ಥರಿಗೆ ಮತ್ತು ಗಾಯಾಳುಗಳಿಗೆ ಪಿಎಂಎನ್ಆರ್ ಎಫ್ ನಿಂದ ಪರಿಹಾರ ಘೋಷಣೆ
Posted On:
24 FEB 2023 11:13AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್‌ಗಢದ ಬಲೋದಬಜಾರ್-ಭಟಪರಾ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಛತ್ತೀಸ್‌ಗಢದ ಬಲೋದಬಜಾರ್-ಭಟಪರಾ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಲಿಯಾದವರ ಕುಟುಂಬಸ್ಥರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಪರಿಹಾರವನ್ನು ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಕಾರ್ಯಾಲಯ;
“ಛತ್ತೀಸ್‌ಗಢದ ಬಲೋದಬಜಾರ್-ಭಟಪರಾ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವ ಕಳೆದುಕೊಂಡವರ ಬಗ್ಗೆ ಕೇಳಿ ನೋವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನ ಮಂತ್ರಿಗಳು ಹಾರೈಸಿರುವುದಾಗಿ ಟ್ವೀಟ್ ಮಾಡಿದ್ದಾರೆ.
“ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬದವರಿಗೆ ಪಿಎಂಎನ್ಆರ್ ಎಫ್ ನಿಂದ ತಲಾ ಎರಡು ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ'' ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.
******
(Release ID: 1901970)
Visitor Counter : 145
Read this release in:
Bengali
,
English
,
Urdu
,
Marathi
,
Hindi
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam