ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಧ್ಯಪ್ರದೇಶದ ಸಿಧಿಯಲ್ಲಿ ಬಸ್ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ 


​​​​​​​ಪಿಎಂಎನ್ ಆರ್ ಎಫ್ ನಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ

प्रविष्टि तिथि: 25 FEB 2023 3:00PM by PIB Bengaluru

ಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಸಿಧಿಯಲ್ಲಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟ ಪ್ರತಿ ಪ್ರಯಾಣಿಕರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. 

ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿ;

“ಮಧ್ಯ ಪ್ರದೇಶದ ಸಿಧಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ದುಃಖವುಂಟಾಗಿದೆ. ತಮ್ಮವರನ್ನು ಕಳೆದುಕೊಂಡವರ ಅವರ ಕುಟುಂಬಸ್ಥರಿಗೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ಭಗವಂತ ನೀಡಲಿ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಸಂತ್ರಸ್ತರಿಗೆ ಮಧ್ಯ ಪ್ರದೇಶ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ''.

''ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ಚಿಕಿತ್ಸೆಗೆ ನೆರವಾಗಲು ತಲಾ 50 ಸಾವಿರ ರೂಪಾಯಿ ಪರಿಹಾರ ವಿತರಿಸಲಾಗುವುದು." ಎಂದು ಟ್ವೀಟ್ ಮಾಡಿದೆ.

***


(रिलीज़ आईडी: 1902425) आगंतुक पटल : 150
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam