ಪ್ರಧಾನ ಮಂತ್ರಿಯವರ ಕಛೇರಿ
ಪ್ರತಿ ಮನೆಗೂ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಮಧ್ಯಪ್ರದೇಶದ ಬುರ್ಹಾನ್ ಪುರದ ಖಡ್ಕಿ ಗ್ರಾಮದ ಸ್ವಸಹಾಯ ಗುಂಪಿನ ಮಹಿಳೆಯರ ಪ್ರಯತ್ನವನ್ನು ಶ್ಲಾಘಿಸಿದ ಪ್ರಧಾನ ಮಂತ್ರಿಗಳು
Posted On:
05 MAR 2023 9:24AM by PIB Bengaluru
ಮಧ್ಯಪ್ರದೇಶದ ಬುರ್ಹಾನ್ ಪುರ ಜಿಲ್ಲೆಯ ಖಡ್ಕಿ ಗ್ರಾಮದ ಸ್ವಸಹಾಯ ಗುಂಪಿನ ಮಹಿಳೆಯರು ಪ್ರತಿ ಮನೆಗೂ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ನಡೆಸಿರುವ ಪ್ರಯತ್ನವನ್ನು ಶ್ಲಾಘಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇದು ಇಡೀ ದೇಶಕ್ಕೆ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ಶ್ರೀ ಪ್ರಹ್ಲಾದ್ ಸಿಂಗ್ ಪಟೇಲ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
"ಬುರ್ಹಾನ್ ಪುರದ ಮಹಿಳೆಯರ ಪ್ರಯತ್ನವು ಇಡೀ ದೇಶಕ್ಕೆ ಒಂದು ಉತ್ತಮ ಉದಾಹರಣೆಯಂತಿದೆ,ʼʼ ಎಂದು ಗುಣಗಾನ ಮಾಡಿದ್ದಾರೆ.
****
(Release ID: 1904423)
Visitor Counter : 181
Read this release in:
English
,
Urdu
,
Hindi
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam