ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ
ಪ್ಯಾರಿಸ್ ಒಲಿಂಪಿಕ್ಸ್ 2024 ರ ಕುರಿತು ಕೇಂದ್ರ ಕ್ರೀಡಾ ಸಚಿವರ ಅಧ್ಯಕ್ಷತೆಯಲ್ಲಿ ಮೊದಲ ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು; ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮತ್ತು ಕೇಂದ್ರ ವಾರ್ತಾ ಮತ್ತು ಪ್ರಸಾರ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಪ್ರತಿನಿಧಿಗಳು ಭಾಗವಹಿಸಿದರು
Posted On:
06 MAR 2023 5:07PM by PIB Bengaluru
ಕೇಂದ್ರ ವಾರ್ತಾ ಮತ್ತು ಪ್ರಸಾರ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರು ಕೇಂದ್ರ ವಾರ್ತಾ ಮತ್ತು ಪ್ರಸಾರ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಖಾತೆಯ ರಾಜ್ಯ ಸಚಿವ ಶ್ರೀ ನಿಸಿತ್ ಪ್ರಮಾಣಿಕ್ ಅವರ ಜೊತೆಗೆ, ಪ್ಯಾರಿಸ್ ಒಲಿಂಪಿಕ್ಸ್ 2024 ಕುರಿತು ಇಂದು ಜರುಗಿದ ಮೊದಲ ಉನ್ನತ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದರು.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಪ್ರತಿನಿಧಿಗಳು ಭಾಗವಹಿಸಿದ್ದ ಈ ಸಭೆಯಲ್ಲಿ ಮುಂದಿನ ವರ್ಷ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್ ನ ಮಾರ್ಗಸೂಚಿಯನ್ನು ವಿವರವಾಗಿ ಚರ್ಚಿಸಲಾಯಿತು ಮತ್ತು ಈ ವರ್ಷ ಹ್ಯಾಂಗ್‌ಝೌನಲ್ಲಿ ಮುಂಬರುವ ಏಷ್ಯನ್ ಗೇಮ್ಸ್‌ಗೆ ಸಿದ್ಧತೆಗಳು ಹಾಗೂ ಮಾಡಬೇಕಾದ ಅಗತ್ಯ ಪೂರ್ವಸಿದ್ಧತೆಗಳ ಬಗ್ಗೆ ಮಾಹಿತಿ ಪಡೆಯಲಾಯಿತು.
ಸಭೆಯ ಕುರಿತು ಮಾತನಾಡಿದ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರು, “ನಮ್ಮ ಕ್ರೀಡಾಪಟುಗಳು ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುವುದನ್ನು ಖಚಿತಪಡಿಸಿಕೊಳ್ಳಲು ನಿರಂತರ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಮತ್ತು ಭಾರತವು ಈ ವರ್ಷ ಹ್ಯಾಂಗ್‌ಝೌನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲಿದೆ. ನಮ್ಮ ಮಿಷನ್ ಒಲಿಂಪಿಕ್ ಸೆಲ್ ಸದಸ್ಯರು ಎರಡು ವಾರಕ್ಕೊಮ್ಮೆ ಸಭೆಗಳನ್ನು ನಡೆಸುತ್ತಿದ್ದಾರೆ. ಪ್ರಗತಿಯನ್ನು ಪರಿಶೀಲಿಸಲು ಮತ್ತು ಎಲ್ಲವೂ ಟ್ರ್ಯಾಕ್‌ನಲ್ಲಿದೆ ಎಂದು ಖಚಿತಪಡಿಸಿಕೊಳ್ಳಲು ತಂಡಗಳು ನಿಯಮಿತವಾಗಿ ಕ್ರೀಡಾಪಟುಗಳೊಂದಿಗೆ ಸಂಪರ್ಕದಲ್ಲಿವೆ. ಇಂದಿನ ಮೌಲ್ಯಮಾಪನ ಸಭೆಯು ಈ ಕುರಿತು ಗಮನಹರಿಸಿದೆ ಮತ್ತು ಇಂದು ಹಾಜರಿದ್ದ ಎಲ್ಲಾ ಪಾಲುದಾರರು ಈ ಏಷ್ಯನ್ ಗೇಮ್ಸ್, ಭಾರತವು ತನ್ನ ಅತ್ಯುತ್ತಮ ಪ್ರದರ್ಶನವನ್ನು ಹೊಂದಲಿದೆ ಎಂದು ತಿಳಿಸಿದರು. ಈ ಏಷ್ಯನ್ ಗೇಮ್ಸ್‌ಗೆ ಯಾವುದೇ ಕುಂದು ಕೊರತೆ ಬಾರದಂತೆ ನೋಡಿಕೊಳ್ಳಲು, ಸರ್ಕಾರ ಅಥವಾ ಕ್ರೀಡಾಪಟುಗಳು ಸೇರಿದಂತೆ ಎಲ್ಲರೂ ಒಟ್ಟಾಗಿ ಶ್ರಮಿಸುತ್ತಿದ್ದಾರೆ.” ಎಂದು ಹೇಳಿದರು
ಈ ವರ್ಷ ಚೀನಾದ ಹ್ಯಾಂಗ್‌ಝೌನಲ್ಲಿ ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಏಷ್ಯನ್ ಗೇಮ್ಸ್ ನಡೆಯಲಿದ್ದು, ಒಲಿಂಪಿಕ್ ಗೇಮ್ಸ್ ಮುಂದಿನ ವರ್ಷ ಫ್ರಾನ್ಸ್ ನ ಪ್ಯಾರಿಸ್ ನಲ್ಲಿ ಜುಲೈ 26, 2024 ರಿಂದ ಆಗಸ್ಟ್ 11, 2024 ರವರೆಗೆ ನಡೆಯಲಿದೆ.
***
(Release ID: 1904619)
Visitor Counter : 229