ಪ್ರಧಾನ ಮಂತ್ರಿಯವರ ಕಛೇರಿ
ತ್ರಿಪುರಾದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಮಾಣಿಕ್ ಸಹಾ ಮತ್ತು ಸಚಿವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
प्रविष्टि तिथि:
08 MAR 2023 3:32PM by PIB Bengaluru
ತ್ರಿಪುರಾದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಾ. ಮಾಣಿಕ್ ಸಹಾ ಮತ್ತು ಅವರ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಅಭಿನಂದನೆ ಸಲ್ಲಿಸಿದ್ದಾರೆ.
ತ್ರಿಪುರಾದಲ್ಲಿ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು.
ಮುಖ್ಯಮಂತ್ರಿ ಡಾ. ಮಾಣಿಕ್ ಸಹಾ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂಬಂಧ ಪ್ರಧಾನಿ ಶ್ರೀ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ.
" ಇಂದು ಪ್ರಮಾಣ ವಚನ ಸ್ವೀಕರಿಸಿದ ಡಾ. ಮಾಣಿಕ್ ಸಹಾ ಜೀ ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಈ ತಂಡವು ಮತ್ತೊಮ್ಮೆ ಜನರು ನೀಡಿದ ಜನಾದೇಶವನ್ನು ಅತ್ಯಂತ ಜವಾಬ್ದಾರಿಯುತವಾಗಿ ಪೂರೈಸುತ್ತದೆ ಮತ್ತು ತ್ರಿಪುರಾ ರಾಜ್ಯದಲ್ಲಿ ಅಭಿವೃದ್ಧಿ ಪಯಣಕ್ಕೆ ವೇಗವನ್ನು ನೀಡುತ್ತದೆ. ಅವರ ಎಲ್ಲ ಪ್ರಯತ್ನಗಳಿಗೆ ಬೆಂಬಲ ಇರುತ್ತದೆ. ಇಡೀ ತಂಡಕ್ಕೆ ಮತ್ತೊಮ್ಮೆ ನನ್ನ ಶುಭಾಶಯಗಳು ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಶುಭ ಕೋರಿದ್ದಾರೆ.
***
(रिलीज़ आईडी: 1905120)
आगंतुक पटल : 197
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam