ಪ್ರಧಾನ ಮಂತ್ರಿಯವರ ಕಛೇರಿ
ಇದೇ ಮೊದಲ ಬಾರಿಗೆ ದೆಹಲಿಯಿಂದ ಹೊರಗೆ 'ರೈಸಿಂಗ್ ಡೇ' ಪರೇಡ್ ಆಯೋಜಿಸಿದ್ದಕ್ಕೆ ಸಿಐಎಸ್ ಎಫ್ ಗೆ ಪ್ರಧಾನ ಮಂತ್ರಿ ಶ್ಲಾಘನೆ
Posted On:
13 MAR 2023 10:52AM by PIB Bengaluru
ಇದೇ ಮೊದಲ ಬಾರಿಗೆ ದೆಹಲಿಯ ಹೊರಗೆ 'ರೈಸಿಂಗ್ ಡೇ' ಆಯೋಜಿಸಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ-CISFನ್ನು ಶ್ಲಾಘಿಸಿದ್ದಾರೆ.
ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರ ಟ್ವೀಟ್ ನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿ;
“ಇದೇ ಮೊದಲ ಬಾರಿಗೆ ದೆಹಲಿಯ ಹೊರಗೆ ತಮ್ಮ ರೈಸಿಂಗ್ ಡೇ ಪರೇಡ್ ನ್ನು ಆಯೋಜಿಸಿದ್ದಕ್ಕಾಗಿ ನಾನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF)ಯನ್ನು ಶ್ಲಾಘಿಸುತ್ತೇನೆ. ಇಂತಹ ನಿರ್ಧಾರಗಳು ಸಹಭಾಗಿತ್ವದ ಆಡಳಿತದ ಉತ್ಸಾಹವನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದ್ದಾರೆ.
***
(Release ID: 1906305)
Visitor Counter : 159
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam