ಪ್ರಧಾನ ಮಂತ್ರಿಯವರ ಕಛೇರಿ
ಭಾರತವನ್ನು ಆರೋಗ್ಯವಾಗಿಡಲು ಅವರ ಪ್ರಯತ್ನಗಳಿಗಾಗಿ ಆರೋಗ್ಯ ಕಾರ್ಯಕರ್ತರನ್ನು ಶ್ಲಾಘಿಸಿದ ಪ್ರಧಾನಮಂತ್ರಿ
ರಾಷ್ಟ್ರೀಯ ಲಸಿಕಾ ದಿನದಂದು ಜನರಿಗೆ ಲಸಿಕೆ ಹಾಕುವಲ್ಲಿ ಭಾರತದ ದಾಪುಗಾಲುಗಳನ್ನು ಜನರು ನೆನಪಿಸಿಕೊಳ್ಳುತ್ತಾರೆ
प्रविष्टि तिथि:
16 MAR 2023 3:00PM by PIB Bengaluru
ಭಾರತವನ್ನು ಆರೋಗ್ಯವಾಗಿಡಲು ಎಲ್ಲಾ ಆರೋಗ್ಯ ಕಾರ್ಯಕರ್ತರು ಮಾಡಿದ ಪ್ರಯತ್ನಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆರೋಗ್ಯ ಕಾರ್ಯಕರ್ತರನ್ನು ಶ್ಲಾಘಿಸಿದ್ದಾರೆ. ರಾಷ್ಟ್ರೀಯ ಲಸಿಕಾ ದಿನದಂದು, ಪ್ರಧಾನಮಂತ್ರಿ ಅವರು ಆರೋಗ್ಯಕರ ಭಾರತವನ್ನು ನಿರ್ಮಿಸುವ ಬದ್ಧತೆಯನ್ನು ಪುನರುಚ್ಚರಿಸಿದರು ಮತ್ತು ಜನರಿಗೆ ಲಸಿಕೆ ಹಾಕುವಲ್ಲಿ ಭಾರತದ ಪ್ರಗತಿಯನ್ನು ಸ್ಮರಿಸಿದರು.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಮನ್ಸುಖ್ ಮಾಂಡವಿಯಾ ಅವರ ಸರಣಿ ಟ್ವೀಟ್ ಸಂದೇಶಗಳಿಗೆ ಸ್ಪಂದಿಸಿ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ;
“ ಭಾರತವನ್ನು ಆರೋಗ್ಯಕರವಾಗಿಡಲು ನಮ್ಮ ಎಲ್ಲಾ ಆರೋಗ್ಯ ಕಾರ್ಯಕರ್ತರು ಮಾಡಿದ ಪ್ರಯತ್ನಗಳಿಗಾಗಿ ಅವರಿಗೆ ಅಭಿನಂದನೆಗಳು.
ರಾಷ್ಟ್ರೀಯ ಲಸಿಕಾ ದಿನದಂದು ನಾವು ಜನರಿಗೆ ಲಸಿಕೆ ನೀಡುವಲ್ಲಿ ಭಾರತದ ದಾಪುಗಾಲುಗಳನ್ನು ನೆನಪಿಸಿಕೊಳ್ಳುತ್ತೇವೆ ಮತ್ತು ಆರೋಗ್ಯಕರ ಭಾರತವನ್ನು ನಿರ್ಮಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ.”
***
(रिलीज़ आईडी: 1907592)
आगंतुक पटल : 154
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam