ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಭಾರತ-ಬಾಂಗ್ಲಾದೇಶ ಮೈತ್ರಿ ಪೈಪ್ಲೈನ್ ಅನ್ನು ಜಂಟಿಯಾಗಿ ಉದ್ಘಾಟಿಸಿದರು
ಐ ಬಿ ಎಫ್ ಪಿ ಭಾರತ ಮತ್ತು ಅದರ ನೆರೆಹೊರೆಯ ರಾಷ್ಟ್ರಗಳ ನಡುವಿನ ಎರಡನೇ ಗಡಿಯಾಚೆಗಿನ ಇಂಧನ ಪೈಪ್ಲೈನ್ ಆಗಿದೆ
ಬಾಂಗ್ಲಾದೇಶದೊಂದಿಗೆ ವರ್ಧಿತ ಸಂಪರ್ಕವು ಜನರ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ
Posted On:
18 MAR 2023 6:03PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶ್ರೀಮತಿ ಶೇಖ್ ಹಸೀನಾ ಅವರು ಇಂದು ಭಾರತ-ಬಾಂಗ್ಲಾದೇಶ ಮೈತ್ರಿ ಪೈಪ್ಲೈನ್ (ಐ ಬಿ ಎಫ್ ಪಿ) ಅನ್ನು ವರ್ಚುವಲ್ ವಿಧಾನದಲ್ಲಿ ಜಂಟಿಯಾಗಿ ಉದ್ಘಾಟಿಸಿದರು. ಈ ಪೈಪ್ಲೈನ್ನ ನಿರ್ಮಾಣಕ್ಕೆ ಸೆಪ್ಟೆಂಬರ್ 2018 ರಲ್ಲಿ ಇಬ್ಬರೂ ಪ್ರಧಾನ ಮಂತ್ರಿಗಳು ಅಡಿಪಾಯ ಹಾಕಿದ್ದರು. ನುಮಾಲಿಗಢ್ ರಿಫೈನರಿ ಲಿಮಿಟೆಡ್ 2015 ರಿಂದ ಬಾಂಗ್ಲಾದೇಶಕ್ಕೆ ಪೆಟ್ರೋಲಿಯಂ ಉತ್ಪನ್ನಗಳನ್ನು ಪೂರೈಸುತ್ತಿದೆ. ಇದು ಭಾರತ ಮತ್ತು ಅದರ ನೆರೆಹೊರೆಯ ರಾಷ್ಟ್ರಗಳ ನಡುವಿನ ಎರಡನೇ ಗಡಿಯಾಚೆಗಿನ ಇಂಧನ ಪೈಪ್ಲೈನ್ ಆಗಿದೆ.
ವಿದ್ಯುತ್ ಮತ್ತು ಇಂಧನ ವಲಯದಲ್ಲಿನ ಸಹಕಾರವು ಭಾರತ-ಬಾಂಗ್ಲಾದೇಶ ಸಂಬಂಧಗಳ ವಿಶಿಷ್ಟ ಲಕ್ಷಣಗಳಲ್ಲಿ ಒಂದಾಗಿದೆ. ಐ ಬಿ ಎಫ್ ಪಿ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಮೊದಲ ಗಡಿಯಾಚೆಗಿನ ಇಂಧನ ಪೈಪ್ಲೈನ್ ಆಗಿದ್ದು, ವರ್ಷಕ್ಕೆ 1 ಮಿಲಿಯನ್ ಮೆಟ್ರಿಕ್ ಟನ್ (MMTPA) ಹೈ-ಸ್ಪೀಡ್ ಡೀಸೆಲ್ (ಹೆಚ್ ಎಸ್ ಡಿ) ಅನ್ನು ಬಾಂಗ್ಲಾದೇಶಕ್ಕೆ ಸಾಗಿಸುವ ಸಾಮರ್ಥ್ಯ ಹೊಂದಿದೆ. ಬಾಂಗ್ಲಾದೇಶದೊಂದಿಗಿನ ವರ್ಧಿತ ಸಂಪರ್ಕವು ಎರಡು ಕಡೆಗಳ ಜನರ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ.
ಬಾಂಗ್ಲಾದೇಶವು ಭಾರತದ ಪ್ರಮುಖ ಅಭಿವೃದ್ಧಿ ಪಾಲುದಾರ ಮತ್ತು ಈ ಪ್ರದೇಶದಲ್ಲಿ ಅದರ ಅತಿದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿದೆ. ಮೈತ್ರಿ ಪೈಪ್ಲೈನ್ನ ಕಾರ್ಯಾಚರಣೆಯು ಉಭಯ ದೇಶಗಳ ನಡುವಿನ ಇಂಧನ ಸಹಕಾರವನ್ನು ಹೆಚ್ಚಿಸುತ್ತದೆ ಮತ್ತು ಬಾಂಗ್ಲಾದೇಶದಲ್ಲಿ ವಿಶೇಷವಾಗಿ ಕೃಷಿ ವಲಯದಲ್ಲಿ ಮತ್ತಷ್ಟು ಬೆಳವಣಿಗೆಯನ್ನು ಸಾಧಿಸುತ್ತದೆ.
ಯೋಜನೆಗೆ ನಿರಂತರ ಮಾರ್ಗದರ್ಶನ ನೀಡಿದ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಉಭಯ ದೇಶಗಳ ಜನರ ಅನುಕೂಲಕ್ಕಾಗಿ ಅವರೊಂದಿಗೆ ಕೆಲಸ ಮಾಡುವುದನ್ನು ಮುಂದುವರೆಸುವ ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು.
****
(Release ID: 1908397)
Visitor Counter : 283
Read this release in:
Bengali
,
English
,
Urdu
,
Marathi
,
Hindi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam