ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡದಲ್ಲಿ 100% ಬ್ರಾಡ್ ಗೇಜ್ ರೈಲು ಮಾರ್ಗಗಳ ವಿದ್ಯುದ್ದೀಕರಣ; ಪ್ರಧಾನ ಮಂತ್ರಿ ಶ್ಲಾಘನೆ
Posted On:
17 MAR 2023 8:10PM by PIB Bengaluru
ಉತ್ತರಾಖಂಡದಲ್ಲಿ ಶೇ.100 ರಷ್ಟು ಬ್ರಾಡ್ ಗೇಜ್ ರೈಲು ಮಾರ್ಗಗಳನ್ನು ವಿದ್ಯುದ್ದೀಕರಣ ಮಾಡಿರುವ ಕಾರ್ಯವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಉತ್ತರಾಖಂಡದ ಶೇ.100 ರಷ್ಟು ಬ್ರಾಡ್ ಗೇಜ್ ರೈಲು ಮಾರ್ಗಗಳ ವಿದ್ಯುದ್ದೀಕರಣದ ಕುರಿತು ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರ ಟ್ವೀಟ್ ಗೆ ಪ್ರಧಾನ ಮಂತ್ರಿ ಪ್ರತಿಕ್ರಿಯೆ ನೀಡಿದ್ದಾರೆ.
ಇದೊಂದು ಉತ್ತೇಜನಾಕಾರಿ ಫಲಿತಾಂಶ! ಇದು ದೈವಭೂಮಿ ಉತ್ತರಾಖಂಡಕ್ಕೆ ಅಪಾರ ಪ್ರಯೋಜನಗಳನ್ನು ನೀಡುತ್ತದೆ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಪ್ರಧಾನಿ ಮರುಟ್ವೀಟ್ ಮಾಡಿದ್ದಾರೆ.
*
(Release ID: 1908398)
Visitor Counter : 149
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam