ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಗಳು ಮೇಕ್ ಇನ್ ಇಂಡಿಯಾ ಮತ್ತು ಮೇಕ್ ಫಾರ್ ದಿ ವರ್ಲ್ಡ್ ಗೆ ಉತ್ತಮ ಉದಾಹರಣೆಗಳಾಗಿವೆ:  ಪ್ರಧಾನಮಂತ್ರಿ

Posted On: 17 MAR 2023 2:30PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ತಮಿಳುನಾಡು, ತೆಲಂಗಾಣ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಗಳನ್ನು ಸ್ಥಾಪಿಸಲಾಗುವುದು ಎಂಬ ಮಾಹಿತಿಯನ್ನು ನೀಡಿದ್ದಾರೆ. ಇದು ಜವಳಿ ಕ್ಷೇತ್ರವನ್ನು 5ಎಫ್ (ಫಾರ್ಮ್ ಟು ಫೈಬರ್ ಟು ಫ್ಯಾಕ್ಟರಿ ಟು ಫ್ಯಾಶನ್ ಟು ಫಾರಿನ್) ದೃಷ್ಟಿಕೋನಕ್ಕೆ ಅನುಗುಣವಾಗಿ ಉತ್ತೇಜಿಸಲಿದೆ. ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಗಳು ಜವಳಿ ಕ್ಷೇತ್ರಕ್ಕೆ ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒದಗಿಸುವುದಲ್ಲದೆ, ಕೋಟಿಗಟ್ಟಲೆ ಹಣ ಹೂಡಿಕೆಯನ್ನು ಆಕರ್ಷಿಸುತ್ತವೆ ಮತ್ತು ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ;

"ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಗಳು 5 ಎಫ್ (ಫಾರ್ಮ್ ಟು ಫೈಬರ್ ಟು ಫ್ಯಾಕ್ಟರಿ ಟು ಫ್ಯಾಶನ್ ಟು ಫಾರಿನ್) ದೃಷ್ಟಿಕೋನಕ್ಕೆ ಅನುಗುಣವಾಗಿ ಜವಳಿ ವಲಯವನ್ನು ಉತ್ತೇಜಿಸಲಿವೆ. ತಮಿಳುನಾಡು, ತೆಲಂಗಾಣ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಗಳನ್ನು ಸ್ಥಾಪಿಸಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತದೆ."

"ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಗಳು ಜವಳಿ ಕ್ಷೇತ್ರಕ್ಕೆ ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒದಗಿಸುತ್ತವೆ, ಕೋಟಿಗಟ್ಟಲೆಯ ಹಣ ಹೂಡಿಕೆಯನ್ನು ಆಕರ್ಷಿಸುತ್ತವೆ ಮತ್ತು ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸುತ್ತವೆ. ಇದು 'ಮೇಕ್ ಇನ್ ಇಂಡಿಯಾ' ಮತ್ತು 'ಮೇಕ್ ಫಾರ್ ದಿ ವರ್ಲ್ಡ್'ಗೆ ಉತ್ತಮ ಉದಾಹರಣೆಯಾಗಲಿದೆ." #PragatiKaPMMitra.
 

***


(Release ID: 1908467) Visitor Counter : 128