ಪ್ರಧಾನ ಮಂತ್ರಿಯವರ ಕಛೇರಿ
'ಬಿಹಾರ ದಿನ' ಅಂಗವಾಗಿ ಬಿಹಾರದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯ
ಪ್ರಕಟಣಾ ದಿನಾಂಕ:
22 MAR 2023 8:42AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜನರಿಗೆ ಬಿಹಾರ ದಿವಸದ ಶುಭಾಶಯ ಕೋರಿದ್ದಾರೆ. ಬಿಹಾರ ಶ್ರೀಮಂತ ಇತಿಹಾಸ ಮತ್ತು ಜೀವಂತ ಸಂಸ್ಕೃತಿಗೆ ಹೆಸರುವಾಸಿಯಾಗಿದೆ ಎಂದು ಅವರು ಹೇಳಿದ್ದಾರೆ. ದೇಶದ ಜನರ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಕೊಡುಗೆ ನೀಡುತ್ತಿರುವ ಬಿಹಾರದ ಜನರು ತಮ್ಮ ಕಠಿಣ ಪರಿಶ್ರಮ ಮತ್ತು ಸಂಕಲ್ಪದಿಂದ ವಿಶೇಷ ಗುರುತನ್ನು ಸೃಷ್ಟಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
"ಬಿಹಾರ ದಿನದಂದು ರಾಜ್ಯದ ಎಲ್ಲಾ ಸಹೋದರ ಸಹೋದರಿಯರಿಗೆ ಶುಭಾಶಯಗಳು! ಶ್ರೀಮಂತ ಇತಿಹಾಸ ಮತ್ತು ರೋಮಾಂಚನ ಹುಟ್ಟಿಸುವ ವೈವಿಧ್ಯ ಸಂಸ್ಕೃತಿಗೆ ಹೆಸರುವಾಸಿಯಾದ ಬಿಹಾರದ ಜನರು ದೇಶದ ಅಭಿವೃದ್ಧಿಗಾಗಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಅಪಾರ ಕೊಡುಗೆ ನೀಡುತ್ತಿದ್ದಾರೆ. ಅವರ ಸಮರ್ಪಣೆ ಮತ್ತು ಕಠಿಣ ಪರಿಶ್ರಮದಿಂದ ಅವರಿಗೆ ವಿಶೇಷ ಗುರುತು ಸಿಕ್ಕಿದೆ ಎಂದು ಬರೆದುಕೊಂಡಿದ್ದಾರೆ.
***
(ಪ್ರಕಟಣೆ ಐ.ಡಿ.: 1909657)
ವಿಸಿಟರ್ ಕೌಂಟರ್ : 148
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam