ಪ್ರಧಾನ ಮಂತ್ರಿಯವರ ಕಛೇರಿ

ಧಾರವಾಡದಲ್ಲಿರುವ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಧಾರವಾಡ ಮತ್ತು ಸುತ್ತಮುತ್ತಲಿನ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ: ಪ್ರಧಾನಿ

Posted On: 25 MAR 2023 11:17AM by PIB Bengaluru

ಧಾರವಾಡದಲ್ಲಿರುವ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಧಾರವಾಡ ಮತ್ತು ಸುತ್ತಮುತ್ತಲಿನ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇದು ಉತ್ಪಾದನೆ ಮತ್ತು ನಾವೀನ್ಯತೆಯ ಜಗತ್ತಿನಲ್ಲಿ ಕರ್ನಾಟಕದ ಪ್ರಗತಿಯನ್ನು ಹೆಚ್ಚಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.

ಕರ್ನಾಟಕದ ಧಾರವಾಡ ಜಿಲ್ಲೆಗೆ ಎಲೆಕ್ಟ್ರಾನಿಕ್ ಉತ್ಪಾದನಾ ಕ್ಲಸ್ಟರ್ ಸಿಕ್ಕಿದೆ ಎಂದು ಕೇಂದ್ರ ಸಚಿವ ಶ್ರೀ ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈ ಕ್ಲಸ್ಟರ್ ಗೆ 1,500 ಕೋಟಿ ರೂಪಾಯಿ ಬಂಡವಾಳ ಹರಿದುಬರುತ್ತದೆ ಮತ್ತು 18,000 ಉದ್ಯೋಗಗಳನ್ನು ಸೃಷ್ಟಿಸುತ್ತದೆ, ಇದು ಧಾರವಾಡ ಜಿಲ್ಲೆ ಮತ್ತು ರಾಜ್ಯದ ಆರ್ಥಿಕತೆಯನ್ನು ಬಲಪಡಿಸುತ್ತದೆ ಎಂದು ಸಚಿವ ಶ್ರಿ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವ ಶ್ರೀ ಪ್ರಹ್ಲಾದ್ ಜೋಶಿ ಅವರ ಟ್ವೀಟ್ ಸಂದೇಶವನ್ನು ರೀ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ಧಾರವಾಡ ಮತ್ತು ಸುತ್ತಮುತ್ತಲಿನ ಜನರಿಗೆ ಈ ಕ್ಲಸ್ಟರ್ನಿಂದ ಹೆಚ್ಚಿನ ಅನುಕೂಲವಾಗಲಿದೆ. ಇದು ಉತ್ಪಾದನೆ ಮತ್ತು ನಾವೀನ್ಯತೆಯ ಜಗತ್ತಿನಲ್ಲಿ ಕರ್ನಾಟಕದ ಪ್ರಗತಿಯನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.

 

*****(Release ID: 1910758) Visitor Counter : 141