ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2023 ನೇ ಸಾಲಿನ ಮೂರು ಪದ್ಮವಿಭೂಷಣ, ಐದು ಪದ್ಮಭೂಷಣ ಮತ್ತು ನಲವತ್ತೇಳು ಪದ್ಮಶ್ರೀ ಪ್ರಶಸ್ತಿಗಳನ್ನು ಎರಡನೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರದಾನ ಮಾಡಿದರು.

Posted On: 05 APR 2023 8:06PM by PIB Bengaluru

ಇಂದು ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ಎರಡನೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2023 ನೇ ಸಾಲಿನ ಮೂರು ಪದ್ಮವಿಭೂಷಣ, ಐದು ಪದ್ಮಭೂಷಣ ಮತ್ತು ನಲವತ್ತೇಳು ಪದ್ಮಶ್ರೀ ಪ್ರಶಸ್ತಿಗಳನ್ನು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಮೊದಲ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾರ್ಚ್ 22, 2023 ರಂದು ಆಯೋಜಿಸಲಾಗಿತ್ತು. 

ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ, ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ, ಕೇಂದ್ರದ ಇತರ ಸಚಿವರು ಮತ್ತು ಗಣ್ಯರು ಉಪಸ್ಥಿತರಿದ್ದರು.

ಪ್ರಶಸ್ತಿ ಸಮಾರಂಭದ ನಂತರ, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಶ್ರೀ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರು ಪದ್ಮ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.

ಪದ್ಮ ಪ್ರಶಸ್ತಿ ಪುರಸ್ಕೃತರು ನಾಳೆ ಬೆಳಗ್ಗೆ (ಏಪ್ರಿಲ್ 6, 2023) ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಗೌರವ ಸಲ್ಲಿಸಲಿದ್ದಾರೆ. ಅವರು ಅಮೃತ್ ಉದ್ಯಾನ, ರಾಷ್ಟ್ರಪತಿ ಭವನ ಹಾಗೂ ಪ್ರಧಾನಮಂತ್ರಿ ಸಂಗ್ರಹಾಲಯಕ್ಕೂ ಭೇಟಿ ನೀಡಲಿದ್ದಾರೆ.

****


(Release ID: 1914086) Visitor Counter : 815