ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಕಲಬುರಗಿಯಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಸ್ಥಾಪನೆಗಾಗಿ ಕರ್ನಾಟಕಕ್ಕೆ ಪ್ರಧಾನ ಮಂತ್ರಿ ಅಭಿನಂದನೆ

प्रविष्टि तिथि: 28 MAR 2023 5:50PM by PIB Bengaluru

ಕಲಬುರಗಿಯಲ್ಲಿ ಪಿಎಂ ಮಿತ್ರ ಬೃಹತ್ (ಮೆಗಾ) ಜವಳಿ ಪಾರ್ಕ್ ಸ್ಥಾಪನೆಗಾಗಿ  ಕರ್ನಾಟಕದ ಜನರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.

ಕೇಂದ್ರ ಸಚಿವ ಶ್ರೀ ಪಿಯೂಷ್ ಗೋಯಲ್ ಅವರ ಟ್ವೀಟ್ ಗೆ ಉತ್ತರವಾಗಿ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ, ಅದರಲ್ಲಿ:

"ಕಲಬುರಗಿಯಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಸ್ಥಾಪಿಸಿದ್ದಕ್ಕಾಗಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಅಭಿನಂದನೆಗಳು. ಈ ಪಾರ್ಕ್ ಕರ್ನಾಟಕದ ಶ್ರೀಮಂತ ಜವಳಿ ಸಂಪ್ರದಾಯಕ್ಕೆ ಮನ್ನಣೆ ನೀಡುತ್ತದೆ ಮತ್ತು ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ” ಎಂದು ಹೇಳಿದ್ದಾರೆ.

“ಕಲಬುರಗಿಯಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಸ್ಥಾಪನೆಗಾಗಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಅಭಿನಂದನೆಗಳು. ಈ ಪಾರ್ಕ್ ಕರ್ನಾಟಕದ ಶ್ರೀಮಂತ ಜವಳಿ ಪರಂಪರೆಯನ್ನು ಸಂಭ್ರಮಾಚರಿಸುತ್ತದೆ ಮತ್ತು ರಾಜ್ಯದ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ.

#PragatiKaPMMitra”

ಲೋಕಸಭಾ ಸಂಸದ ಡಾ.ಉಮೇಶ್ ಜಿ.ಜಾಧವ್ ಅವರ ಟ್ವೀಟ್ ಗೆ ಉತ್ತರಿಸಿರುವ  ಪ್ರಧಾನಮಂತ್ರಿಯವರು, ಮೆಗಾ ಜವಳಿ ಪಾರ್ಕ್ ಮೂಲಕ ದೇಶದ ಜವಳಿ ವೈವಿಧ್ಯತೆಯನ್ನು ಜಗತ್ತಿಗೆ ಪ್ರದರ್ಶಿಸುವ ಸಾಮರ್ಥ್ಯವನ್ನು ಪ್ರಸ್ತಾಪಿಸಿದ್ದಾರೆ.

ಈ ಬಗ್ಗೆ ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:

"ನಿಜವಾಗಿಯೂ ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಕಲಬುರಗಿಗೆ ವಿಶೇಷ ದಿನ. ಈ ಜವಳಿ ಪಾರ್ಕ್ ಮೂಲಕ, ಜಗತ್ತು ಭಾರತದ ಜವಳಿ ವೈವಿಧ್ಯತೆ ಮತ್ತು ನಮ್ಮ ಜನರ ಸೃಜನಶೀಲತೆಯ ಇಣುಕು ನೋಟವನ್ನು ಪಡೆಯುತ್ತದೆ. #PragatiKaPMMitra"

ಎಂದವರು ಹೇಳಿದ್ದಾರೆ.

“ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಕಲಬುರಗಿಗೆ ನಿಜಕ್ಕೂ ವಿಶೇಷ ದಿನ. ಈ ಜವಳಿ ಪಾರ್ಕ್ ಮೂಲಕ ಜಗತ್ತು ಭಾರತದ ಜವಳಿ ವೈವಿಧ್ಯತೆ ಮತ್ತು ನಮ್ಮ ಜನರ ಸೃಜನಶೀಲತೆಯ ದರ್ಶನ ಪಡೆಯುತ್ತದೆ.

#PragatiKaPMMitra”

*****


(रिलीज़ आईडी: 1914098) आगंतुक पटल : 150
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam