ಪ್ರಧಾನ ಮಂತ್ರಿಯವರ ಕಛೇರಿ
ಕೇರಳದ ತಿರುವನಂತಪುರಂ ಸೆಂಟ್ರಲ್ ನಿಲ್ದಾಣದಲ್ಲಿ ತಿರುವನಂತಪುರಂ ಮತ್ತು ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಪ್ರಧಾನಮಂತ್ರಿ ಅವರು ಹಸಿರು ನಿಶಾನೆ ತೋರಿದರು.
Posted On:
25 APR 2023 2:16PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರುವನಂತಪುರಂ ಸೆಂಟ್ರಲ್ ನಿಲ್ದಾಣದಲ್ಲಿ ತಿರುವನಂತಪುರಂ ಮತ್ತು ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿದರು. ತಿರುವನಂತಪುರಂ- ಕಾಸರಗೋಡು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಪರಿಶೀಲಿಸಿದ ಪ್ರಧಾನಮಂತ್ರಿ, ಮಕ್ಕಳು ಮತ್ತು ರೈಲಿನ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.
ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪಥನಂತಿಟ್ಟ, ಮಲಪ್ಪುರಂ, ಕೋಯಿಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳನ್ನು ಈ ರೈಲು ಕ್ರಮಿಸಲಿದೆ.
ಈ ಸಂಬಂಧ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ:
“ ತಿರುವನಂತಪುರಂನಿಂದ ಕಾಸರಗೋಡಿಗೆ ಸಂಪರ್ಕವನ್ನು ಹೆಚ್ಚಿಸುವ ಕೇರಳದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿದ್ದೇವೆ,’’ ಎಂದು ತಿಳಿಸಿದರು.
****
(Release ID: 1921564)
Visitor Counter : 114
Read this release in:
English
,
Urdu
,
Marathi
,
Hindi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam