ಪ್ರಧಾನ ಮಂತ್ರಿಯವರ ಕಛೇರಿ

5 ವರ್ಷಗಳ ಉಪಕ್ರಮವನ್ನು ಪೂರ್ಣಗೊಳಿಸಿದ ನಂತರ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವಲ್ಲಿ ಖೇಲೋ ಇಂಡಿಯಾ ವಹಿಸಿದ ಪಾತ್ರವನ್ನು ಗುರುತಿಸಿದ ಪ್ರಧಾನಮಂತ್ರಿ

Posted On: 22 APR 2023 7:49PM by PIB Bengaluru

5 ವರ್ಷಗಳ ಉಪಕ್ರಮವನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವಲ್ಲಿ ಖೇಲೋ ಇಂಡಿಯಾ ವಹಿಸಿದ ಪಾತ್ರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರುತಿಸಿದ್ದಾರೆ.

ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರ ಟ್ವೀಟ್ ಸಂದೇಶಕ್ಕೆ ಸ್ಪಂದಿಸಿದ ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ;

“ನಾವು ಖೇಲೋ ಇಂಡಿಯಾದ 5 ವರ್ಷಗಳನ್ನು ಆಚರಿಸುತ್ತಿರುವಾಗ, ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವಲ್ಲಿ ಮತ್ತು ಕ್ರೀಡಾಪಟುಗಳಿಗೆ ಮಿಂಚಲು ಉತ್ತಮ ವೇದಿಕೆಯನ್ನು ನೀಡುವಲ್ಲಿ ಈ ಉಪಕ್ರಮವು ವಹಿಸಿದ ಪಾತ್ರವನ್ನು ನಾವು ಗುರುತಿಸುತ್ತೇವೆ. ನಮ್ಮ ಸರ್ಕಾರವು ಭಾರತದಲ್ಲಿ ಕ್ರೀಡೆಗಳು ಅಭಿವೃದ್ಧಿ ಹೊಂದಲು ಸೂಕ್ತವಾದ ವಾತಾವರಣವನ್ನು ಸೃಷ್ಟಿಸುವುದನ್ನು ಮುಂದುವರಿಸುತ್ತದೆ."

 

***



(Release ID: 1921625) Visitor Counter : 118