ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆರು ವರ್ಷಗಳ ಉಡಾನ್ ಯೋಜನೆಯ ಸಾಧನೆಗಳನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ

प्रविष्टि तिथि: 28 APR 2023 10:18AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನಾಗರಿಕ ವಿಮಾನಯಾನ ಸಚಿವಾಲಯದ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದು, 6 ವರ್ಷಗಳ ಹಿಂದೆ ಪ್ರಾದೇಶಿಕ ಸಂಪರ್ಕ ಯೋಜನೆ (ಆರ್ ಸಿಎಸ್) ಉಡಾನ್ ಯೋಜನೆಯಡಿ ಶಿಮ್ಲಾವನ್ನು ದೆಹಲಿಗೆ ಸಂಪರ್ಕಿಸುವ ವಿಮಾನ ಹಾರಾಟ ನಡೆಸಲಾಯಿತು. ಇಂದು, 473 ಮಾರ್ಗಗಳು ಮತ್ತು 74 ಕಾರ್ಯಾಚರಣೆಯ ವಿಮಾನ ನಿಲ್ದಾಣಗಳು, ಹೆಲಿಪೋರ್ಟ್ ಗಳು ಮತ್ತು ವಾಟರ್ ಏರೋಡ್ರೋಮ್ ಗಳು ಭಾರತೀಯ ವಾಯುಯಾನ ಕ್ಷೇತ್ರದಲ್ಲಿ ಗೇಮ್ ಚೇಂಜರ್ ಆಗಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ

ಟ್ವೀಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು, ಕಳೆದ 9 ವರ್ಷಗಳು ಭಾರತದ ವಾಯುಯಾನ ಕ್ಷೇತ್ರದಲ್ಲಿ ಬದಲಾವಣೆಯ ಅವಧಿಯಾಗಿವೆ. ಅಸ್ತಿತ್ವದಲ್ಲಿರುವ ವಿಮಾನ ನಿಲ್ದಾಣಗಳನ್ನು ಆಧುನೀಕರಿಸಲಾಗಿದೆ, ಹೊಸ ವಿಮಾನ ನಿಲ್ದಾಣಗಳನ್ನು ತ್ವರಿತ ಗತಿಯಲ್ಲಿ ನಿರ್ಮಿಸಲಾಗಿದೆ ಮತ್ತು ದಾಖಲೆ ಸಂಖ್ಯೆಯ ಜನರು ವಿಮಾನಹಾರಾಟ ನಡೆಸುತ್ತಿದ್ದಾರೆ ಎಂದು ಶ್ರೀ ಮೋದಿ ತಿಳಿಸಿದ್ದಾರೆ.

ಪ್ರಧಾನಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

"ಕಳೆದ 9 ವರ್ಷಗಳು ಭಾರತದ ವಾಯುಯಾನ ಕ್ಷೇತ್ರದಲ್ಲಿ ಹೆಚ್ಚಿನ ಬದಲಾವಣೆಗಳಾಗಿವೆ. ಅಸ್ತಿತ್ವದಲ್ಲಿರುವ ವಿಮಾನ ನಿಲ್ದಾಣಗಳನ್ನು ಆಧುನೀಕರಿಸಲಾಗಿದೆ, ಹೊಸ ವಿಮಾನ ನಿಲ್ದಾಣಗಳನ್ನು ತ್ವರಿತಗತಿಯಲ್ಲಿ ನಿರ್ಮಿಸಲಾಗಿದೆ ಮತ್ತು ದಾಖಲೆ ಸಂಖ್ಯೆಯ ಜನರು ವಿಮಾನಯಾನ ಕೈಗೊಂಡಿದ್ದಾರೆ. ಈ ಸುಧಾರಿತ ಸಂಪರ್ಕವು ವಾಣಿಜ್ಯ ಮತ್ತು ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಿದೆ. #UDANat6"

 

*****


(रिलीज़ आईडी: 1921637) आगंतुक पटल : 155
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam