ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರೋಜ್‌ಗಾರ್ ಮೇಳದ ಅಡಿ, ಏಪ್ರಿಲ್ 13ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕ ಆದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಲಿರುವ ಪ್ರಧಾನ ಮಂತ್ರಿ 

Posted On: 11 APR 2023 12:42PM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ಏಪ್ರಿಲ್ 13ರಂದು ಬೆಳಗ್ಗೆ 10:30ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ನೇಮಕವಾದ ಉದ್ಯೋಗಿಗಳಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಅವರು ಈ ಉದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನ ಮಂತ್ರಿ ಅವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ದಿಟ್ಟ ಹೆಜ್ಜೆಯಾಗಿದೆ. ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯ ನಿರ್ವಹಿಸುತ್ತದೆ. ಯುವಜನರ ಸಬಲೀಕರಣ ಮತ್ತು ಅವರು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಭಾರತ ಸರ್ಕಾರದ ಅಡಿ ದೇಶಾದ್ಯಂತ ಆಯ್ಕೆಯಾದ ಹೊಸ ನೇಮಕಾತಿಗಳು ರೈಲ್ವೆ ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಹಿರಿಯ ವಾಣಿಜ್ಯ ಕಮ್ ಟಿಕೆಟ್ ಕ್ಲರ್ಕ್, ಇನ್ಸ್‌ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್‌ಗಳು, ಕಾನ್ಸ್‌ಟೇಬಲ್, ಸ್ಟೆನೋಗ್ರಾಫರ್, ಜೂನಿಯರ್ ಅಕೌಂಟೆಂಟ್, ಪೋಸ್ಟಲ್ ಅಸಿಸ್ಟೆಂಟ್, ತೆರಿಗೆ ನಿರೀಕ್ಷಕರು, ತೆರಿಗೆ ಸಹಾಯಕರು, ಸೀನಿಯರ್ ಡ್ರಾಟ್ಸ್‌ಮನ್, ಜೆಇ, ಮೇಲ್ವಿಚಾರಕರು, ಸಹಾಯಕ ಪ್ರಾಧ್ಯಾಪಕರು, ಶಿಕ್ಷಕರು, ಗ್ರಂಥಪಾಲಕರು, ನರ್ಸ್, ಪ್ರೊಬೇಷನರಿ ಅಧಿಕಾರಿಗಳು, ಪಿಎ, ಎಂಟಿಎಸ್ ಇತ್ಯಾದಿ ವಿವಿಧ ಹುದ್ದೆಗಳಿಗೆ ಸೇರಲಿದ್ದಾರೆ.

ಹೊಸದಾಗಿ ನೇಮಕವಾದವರು “ಕರ್ಮಯೋಗಿ ಪ್ರಾರಂಭ್” ಮೂಲಕ ತರಬೇತಿ ಪಡೆಯಲು ಅವಕಾಶ ಪಡೆಯುತ್ತಾರೆ, ಇದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕವಾದವರಿಗೆ ಆನ್‌ಲೈನ್ ಓರಿಯಂಟೇಶನ್ ಕೋರ್ಸ್ ಆಗಿದೆ.

****


(Release ID: 1921916) Visitor Counter : 130