ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರದ ರಾಯಗಡದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ
प्रविष्टि तिथि:
15 APR 2023 1:49PM by PIB Bengaluru
ಸಂತ್ರಸ್ತರಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಘೋಷಣೆ
ಮಹಾರಾಷ್ಟ್ರದ ರಾಯಗಡದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್. ಎಫ್ )ಯಿಂದ ಸಂತ್ರಸ್ತರಿಗೆ ಪರಿಹಾರ ಧನವನ್ನು ಶ್ರೀ ಮೋದಿ ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯದ ಸರಣಿ ಟ್ವೀಟ್ ಗಳಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;
"ಮಹಾರಾಷ್ಟ್ರದ ರಾಯಗಢದಲ್ಲಿ ನಡೆದ ಬಸ್ ಅಪಘಾತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿದೆ: ಪ್ರಧಾನ ಮಂತ್ರಿ "
"ರಾಯಗಢದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ.ತಾತ್ಕಾಲಿಕ ಪರಿಹಾರ ನೀಡಲಾಗುವುದು”
***
(रिलीज़ आईडी: 1922477)
आगंतुक पटल : 142
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam