ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಿಬಿಎಸ್‌ಇ XII ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಎಲ್ಲರನ್ನೂ ಅಭಿನಂದಿಸಿದ ಪ್ರಧಾನಮಂತ್ರಿ

प्रविष्टि तिथि: 12 MAY 2023 2:42PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಬಿಎಸ್‌ಇ XII ತರಗತಿಯ ಪರೀಕ್ಷೆಗಳಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ಎಲ್ಲಾ #ExamWorriors ಗಳನ್ನು ಅಭಿನಂದಿಸಿದ್ದಾರೆ.

ಈ ಕುರಿತು ಪ್ರಧಾನಿಯವರು ಸರಣಿ ಟ್ವೀಟ್‌ ಮಾಡಿದ್ದಾರೆ.

"ಸಿಬಿಎಸ್‌ಇ ಹನ್ನೆರಡನೇ ತರಗತಿ ಪರೀಕ್ಷೆಗಳಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ಎಲ್ಲಾ #ExamWorriors ಗಳಿಗೆ ನನ್ನ ಅಭಿನಂದನೆಗಳು. ಈ ಯುವಜನರ ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪಕ್ಕಾಗಿ ನಾನು ಹೆಮ್ಮೆಪಡುತ್ತೇನೆ. ಯುವಜನರ ಯಶಸ್ಸಿನಲ್ಲಿ ಗುರುತರವಾದ ಪಾತ್ರ ವಹಿಸಿದ್ದಕ್ಕಾಗಿ ಅವರ ಪೋಷಕರು ಮತ್ತು ಶಿಕ್ಷಕರಿಗೂ ನನ್ನ ಅಭಿನಂದನೆಗಳು."

"ಹನ್ನೆರಡನೇ ತರಗತಿಯ ಪರೀಕ್ಷೆಗಳಲ್ಲಿ ತಾವು ಉತ್ತಮವಾಗಿ ಕಾರ್ಯನಿರ್ವಹಿಸಿದ್ದೇವೆಂದು ಭಾವಿಸುವ ಪ್ರತಿಭಾವಂತ ಯುವಕರಿಗೆ ನಾನು ಹೇಳಲು ಬಯಸುವುದೇನೆಂದರೆ, ಮುಂಬರುವ ದಿನಗಳಲ್ಲಿ ನೀವು ಇನ್ನೂ ಹೆಚ್ಚಿನದನ್ನು ಮಾಡಬೇಕಾಗುತ್ತದೆ. ಒಂದು ಪರೀಕ್ಷೆ ನಿಮ್ಮನ್ನು ವ್ಯಾಖ್ಯಾನಿಸುವುದಿಲ್ಲ. ನಿಮಗೆ ಇಷ್ಟವಾದ ಕ್ಷೇತ್ರದಲ್ಲಿ ನಿಮ್ಮ ಪ್ರತಿಭೆಯನ್ನು ಬಳಸಿಕೊಳ್ಳಿ. ನೀವು ಯಶಸ್ಸು ಕಾಣುತ್ತೀರಿ!" ಎಂದು ಪ್ರಧಾನಿಯವರು ತಿಳಿಸಿದ್ದಾರೆ.

 

 

 

 

*****

 

 


(रिलीज़ आईडी: 1923745) आगंतुक पटल : 169
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Manipuri , Bengali , Punjabi , Gujarati , Odia , Tamil , Telugu , Malayalam