ಯುಪಿಎಸ್‍ಸಿ ( ಕೇಂದ್ರ ಸಾರ್ವಜನಿಕ ಸೇವೆಗಳ ಆಯೋಗ)

ಜಂಟಿ ಕಾರ್ಯದರ್ಶಿ/ ನಿರ್ದೇಶಕ/ ಉಪ ಕಾರ್ಯದರ್ಶಿ ಮಟ್ಟದ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಲ್ಯಾಟರಲ್ (ಪರಿಣಿತರ ವಿಶೇಷ) ನೇಮಕಾತಿ


ನಾಲ್ವರು ಜಂಟಿ ಕಾರ್ಯದರ್ಶಿಗಳು ಮತ್ತು 16 ನಿರ್ದೇಶಕರು/ಉಪ ಕಾರ್ಯದರ್ಶಿಗಳನ್ನು ಲ್ಯಾಟರಲ್ ನೇಮಕಾತಿ ಮೂಲಕ ಸೇರಿಸಿಕೊಳ್ಳಲಾಗುತ್ತದೆ.

Posted On: 18 MAY 2023 2:46PM by PIB Bengaluru

ಭಾರತ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ವಿನಂತಿಯ ಮೇರೆಗೆ, ಸರ್ಕಾರದ ಈ ಕೆಳಕಂಡ ಇಲಾಖೆಗಳು/ಸಚಿವಾಲಯಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಜಂಟಿ ಕಾರ್ಯದರ್ಶಿ/ನಿರ್ದೇಶಕ/ಉಪ ಕಾರ್ಯದರ್ಶಿ ಮಟ್ಟದಲ್ಲಿ ಸರ್ಕಾರಕ್ಕೆ ಸೇರಲು ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ:

i.          ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ

ii          ನಾಗರಿಕ ವಿಮಾನಯಾನ ಸಚಿವಾಲಯ

iii         ರಾಸಾಯನಿಕಗಳು ಮತ್ತು ಪೆಟ್ರೋಕೆಮಿಕಲ್ಸ್ ಇಲಾಖೆ, ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯ.

iv.        ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ

v.         ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ, ಗ್ರಾಹಕ ವ್ಯವಹಾರಗಳ ಸಚಿವಾಲಯ, ಆಹಾರ ಮತ್ತು ಸಾರ್ವಜನಿಕ ವಿತರಣೆ

vi.        ಭಾರೀ ಕೈಗಾರಿಕೆಗಳ ಸಚಿವಾಲಯ

vii.       ಉನ್ನತ ಶಿಕ್ಷಣ ಇಲಾಖೆ, ಶಿಕ್ಷಣ ಸಚಿವಾಲಯ

viii.      ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ

ix.        ಕಾನೂನು ವ್ಯವಹಾರಗಳ ಇಲಾಖೆ, ಕಾನೂನು ಮತ್ತು ನ್ಯಾಯ ಸಚಿವಾಲಯ

X.        ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನಾ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯ

xi         ಫಾರ್ಮಾಸ್ಯುಟಿಕಲ್ಸ್ ಇಲಾಖೆ, ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯ

xii        ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಶಿಕ್ಷಣ ಸಚಿವಾಲಯ

ಮೇಲಿನ ಸಚಿವಾಲಯಗಳು/ಇಲಾಖೆಗಳಲ್ಲಿ ಲ್ಯಾಟರಲ್ (ಪರಿಣಿತರ ವಿಶೇಷ) ನೇಮಕಾತಿ ಮೂಲಕ ನಾಲ್ಕು ಜಂಟಿ ಕಾರ್ಯದರ್ಶಿಗಳು ಮತ್ತು 16 ನಿರ್ದೇಶಕರು/ಉಪ ಕಾರ್ಯದರ್ಶಿಗಳನ್ನು ನೇಮಿಸಿಕೊಳ್ಳಲಾಗುತ್ತದೆ.

ವಿವರವಾದ ಜಾಹೀರಾತು ಮತ್ತು ಅಭ್ಯರ್ಥಿಗಳಿಗೆ ಸೂಚನೆಗಳನ್ನು ಆಯೋಗದ ವೆಬ್‌ಸೈಟ್‌ನಲ್ಲಿ 20ನೇ ಮೇ 2023 ರಂದು ಅಪ್‌ಲೋಡ್ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು 20ನೇ ಮೇ 2023 ರಿಂದ 19ನೇ ಜೂನ್ 2023 ರವರೆಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಯಲ್ಲಿ ಒದಗಿಸಿದ ಮಾಹಿತಿಯ ಆಧಾರದ ಮೇಲೆ ಸಂದರ್ಶನಕ್ಕಾಗಿ ಅಭ್ಯರ್ಥಿಗಳ ಪಟ್ಟಿ ಮಾಡಲಾಗುವುದು. ನೀಡಿರುವ ಮಾಹಿತಿಯು ಸರಿಯಾಗಿದೆಯೇ ಎಂಬುದನ್ನು ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.

*****



(Release ID: 1925247) Visitor Counter : 134