ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಇಸ್ರೇಲ್ ವಿದೇಶಾಂಗ ಸಚಿವರು
ಕೃಷಿ, ನೀರು, ನಾವೀನ್ಯತೆ ಮತ್ತು ಜನರ ನಡುವಿನ ಸಂಬಂಧಗಳಂತಹ ಆದ್ಯತೆಯ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಬಗ್ಗೆ ಅವರು ಚರ್ಚಿಸಿದರು
ಪ್ರಧಾನಮಂತ್ರಿ ನೆತನ್ಯಾಹು ಅವರಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ
Posted On:
09 MAY 2023 9:00PM by PIB Bengaluru
ಇಸ್ರೇಲ್ ನ ವಿದೇಶಾಂಗ ಸಚಿವ ಘನತೆವೆತ್ತ ಶ್ರೀ ಎಲಿ ಕೋಹೆನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು ಕೃಷಿ, ನೀರು, ನಾವೀನ್ಯತೆ ಮತ್ತು ಜ್ಞಾನ ಪಾಲುದಾರಿಕೆಯ ಆದ್ಯತೆಯ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಹಕಾರದ ಹಲವಾರು ವಿಷಯಗಳ ಬಗ್ಗೆ ಅವರು ಚರ್ಚಿಸಿದರು.
ಪರಸ್ಪರ ಹಿತಾಸಕ್ತಿಯ ವಿವಿಧ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಅವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸುವಂತೆ ಹಣಕಾಸು ಸಚಿವ ಎಲಿ ಕೋಹೆನ್ ಅವರಿಗೆ ಪ್ರಧಾನಮಂತ್ರಿಯವರು ಮನವಿ ಮಾಡಿದರು.
****
(Release ID: 1925459)
Visitor Counter : 146
Read this release in:
Malayalam
,
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu