ಪ್ರಧಾನ ಮಂತ್ರಿಯವರ ಕಛೇರಿ
ಜಪಾನ್ ಪ್ರಧಾನಿಯವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ
Posted On:
20 MAY 2023 8:16AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 20 ಮೇ 2023 ರಂದು ಹಿರೋಷಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಜಪಾನ್ ಪ್ರಧಾನಿ ಘನತೆವೆತ್ತ ಶ್ರೀ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.
ಈ ವರ್ಷದ ಮಾರ್ಚ್‌ನಲ್ಲಿ ಪ್ರಧಾನ ಮಂತ್ರಿ ಕಿಶಿಡಾ ಭಾರತಕ್ಕೆ ಭೇಟಿ ನೀಡಿದ ನಂತರ 2023 ರಲ್ಲಿ ಇದು ಉಭಯ ನಾಯಕರ ಎರಡನೇ ಸಭೆಯಾಗಿದೆ.
2023ರ ಮಾರ್ಚ್‌ನಲ್ಲಿ ಪ್ರಧಾನಿ ಮೋದಿಯವರು ಉಡುಗೊರೆಯಾಗಿ ನೀಡಿದ ಬೋಧಿ ಸಸ್ಯವನ್ನು ಹಿರೋಷಿಮಾದಲ್ಲಿ ನೆಟ್ಟಿದ್ದಕ್ಕಾಗಿ ಪ್ರಧಾನಮಂತ್ರಿಯವರು ಕಿಶಿಡಾ ಅವರಿಗೆ ಧನ್ಯವಾದ ತಿಳಿಸಿದರು.
ಭಾರತೀಯ ಸಂಸತ್ತು ಪ್ರತಿ ವರ್ಷ ಹಿರೋಷಿಮಾ ದಿನವನ್ನು ಸ್ಮರಿಸುವುದನ್ನು ನೆನಪಿಸಿಕೊಂಡ ಪ್ರಧಾನಮಂತ್ರಿಯವರು, ಈ ಸಂದರ್ಭದಲ್ಲಿ ಜಪಾನಿನ ರಾಜತಾಂತ್ರಿಕರು ಯಾವಾಗಲೂ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.
ಉಭಯ ನಾಯಕರು ತಮ್ಮ ಜಿ-20 ಮತ್ತು ಜಿ-7 ಅಧ್ಯಕ್ಷತೆಗಳ ಪ್ರಯತ್ನಗಳನ್ನು ಸಂಯೋಜಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು. ಆರ್ಥಿಕವಾಗಿ ಹಿಂದುಳಿದ ರಾಷ್ಟ್ರಗಳ (ಗ್ಲೋಬಲ್ ಸೌತ್) ಬಗೆಗಿನ ಕಾಳಜಿ ಮತ್ತು ಆದ್ಯತೆಗಳನ್ನು ಎತ್ತಿ ಹಿಡಿಯಬೇಕಾದ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು.
ಸಮಕಾಲೀನ ಪ್ರಾದೇಶಿಕ ಬೆಳವಣಿಗೆಗಳ ಕುರಿತು ಉಭಯ ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಅವರು ಇಂಡೋ-ಪೆಸಿಫಿಕ್‌ನಲ್ಲಿ ಗಾಢವಾದ ಸಹಕಾರದ ಬಗ್ಗೆ ಚರ್ಚಿಸಿದರು.
ದ್ವಿಪಕ್ಷೀಯ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ನಾಯಕರು ಒಪ್ಪಿಕೊಂಡರು. ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಪ್ರವಾಸೋದ್ಯಮ, ಪರಿಸರಕ್ಕಾಗಿ ಜೀವನಶೈಲಿ (ಲೈಫ್), ಹಸಿರು ಹೈಡ್ರೋಜನ್, ಉನ್ನತ ತಂತ್ರಜ್ಞಾನ, ಸೆಮಿಕಂಡಕ್ಟರ್ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಕ್ಷೇತ್ರಗಳ ಮೇಲೆ ಚರ್ಚೆಗಳು ಕೇಂದ್ರೀಕೃತವಾದವು. ಭಯೋತ್ಪಾದನೆ ವಿರುದ್ಧದ ಹೋರಾಟ ಮತ್ತು ವಿಶ್ವಸಂಸ್ಥೆಯ ಸುಧಾರಣೆ ಬಗ್ಗೆಯೂ ಚರ್ಚಿಸಲಾಯಿತು.
(Release ID: 1925978)
Visitor Counter : 162
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam