ಪ್ರಧಾನ ಮಂತ್ರಿಯವರ ಕಛೇರಿ
ಕೊರಿಯಾ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಸಭೆ
Posted On:
20 MAY 2023 12:06PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊರಿಯಾ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಯೂನ್ ಸುಕ್ ಯೆಲ್ ಅವರನ್ನು 20 ಮೇ 2023 ರಂದು ಹಿರೋಷಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಭೇಟಿಯಾದರು.
ಭಾರತ - ಕೊರಿಯಾ ಗಣರಾಜ್ಯ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿಯನ್ನು ನಾಯಕರು ಪರಿಶೀಲಿಸಿದರು ಮತ್ತು ದ್ವಿಪಕ್ಷೀಯ ಸಹಕಾರವನ್ನು ವಿಶೇಷವಾಗಿ ವ್ಯಾಪಾರ ಮತ್ತು ಹೂಡಿಕೆ, ಉನ್ನತ ತಂತ್ರಜ್ಞಾನ, ಐಟಿ ಹಾರ್ಡ್‌ವೇರ್ ಉತ್ಪಾದನೆ, ರಕ್ಷಣೆ, ಸೆಮಿಕಂಡಕ್ಟರ್ ಮತ್ತು ಸಂಸ್ಕೃತಿಯ ಕ್ಷೇತ್ರಗಳಲ್ಲಿ ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದರು.
ಎರಡೂ ದೇಶಗಳು ಈ ವರ್ಷ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 50 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿವೆ ಮತ್ತು ತಮ್ಮ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ಒಪ್ಪಿಕೊಂಡಿವೆ.
ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಪ್ರಧಾನ ಮಂತ್ರಿಯವರ ಜಿ-20 ನಾಯಕತ್ವವನ್ನು ಶ್ಲಾಘಿಸಿದರು ಮತ್ತು ತಮ್ಮ ಬೆಂಬಲವನ್ನು ಸೂಚಿಸಿದರು. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಜಿ20 ನಾಯಕರ ಶೃಂಗಸಭೆಗಾಗಿ ಅಧ್ಯಕ್ಷ ಯೂನ್ ಭಾರತಕ್ಕೆ ಭೇಟಿ ನೀಡುವುದನ್ನು ಪ್ರಧಾನಿ ಎದುರು ನೋಡುತ್ತಿದ್ದಾರೆ.
ಕೊರಿಯಾ ಗಣರಾಜ್ಯದ ಇಂಡೋ-ಪೆಸಿಫಿಕ್ ಕಾರ್ಯತಂತ್ರ ಮತ್ತು ಅದರಲ್ಲಿ ಭಾರತಕ್ಕೆ ನೀಡಲಾದ ಪ್ರಾಮುಖ್ಯತೆಯನ್ನು ಪ್ರಧಾನಿ ಸ್ವಾಗತಿಸಿದರು.
ನಾಯಕರು ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಸಕಾರಾತ್ಮಕ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
********
(Release ID: 1925979)
Visitor Counter : 138
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam