ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಯೆಟ್ನಾಂ ಪ್ರಧಾನಿಯೊಂದಿಗೆ ಪ್ರಧಾನ ಮಂತ್ರಿಯವರ ಸಭೆ

प्रविष्टि तिथि: 20 MAY 2023 12:07PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 20 ಮೇ 2023 ರಂದು ಹಿರೋಷಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ವಿಯೆಟ್ನಾಂನ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ಫಾಮ್ ಮಿನ್ ಚಿನ್ಹ್ ಅವರನ್ನು ಭೇಟಿಯಾದರು.

ಉಭಯ ನಾಯಕರು ದ್ವಿಪಕ್ಷೀಯ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ಸಾಧಿಸಿದ ಸ್ಥಿರವಾದ ಪ್ರಗತಿಯನ್ನು ಪರಿಶೀಲಿಸಿದರು. ಉನ್ನತ ಮಟ್ಟದ ವಿನಿಮಯವನ್ನು ಹೆಚ್ಚಿಸಲು ಮತ್ತು ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳನ್ನು ಗಾಢವಾಗಿಸಲು ಅವರು ಒಪ್ಪಿಕೊಂಡರು.

ರಕ್ಷಣಾ ಕ್ಷೇತ್ರಗಳಲ್ಲಿನ ಅವಕಾಶಗಳು, ಚೇತರಿಕೆಯ ಪೂರೈಕೆ ಸರಪಳಿಗಳನ್ನು ನಿರ್ಮಿಸುವುದು, ಇಂಧನ, ವಿಜ್ಞಾನ ಮತ್ತು ತಂತ್ರಜ್ಞಾನ, ಮಾನವ ಸಂಪನ್ಮೂಲ ಅಭಿವೃದ್ಧಿ, ಸಂಸ್ಕೃತಿ ಮತ್ತು ಪರಸ್ಪರ  ಸಂಬಂಧಗಳ ಬಗ್ಗೆ ಅವರು ಚರ್ಚಿಸಿದರು.

ನಾಯಕರು ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಸಕಾರಾತ್ಮಕ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಅವರು ಆಸಿಯಾನ್ ಮತ್ತು ಇಂಡೋ-ಪೆಸಿಫಿಕ್‌ನಲ್ಲಿ ಸಹಕಾರದ ಬಗ್ಗೆ ಚರ್ಚಿಸಿದರು.

ಭಾರತದ ಜಿ-20 ಅಧ್ಯಕ್ಷತೆ ಮತ್ತು ಆರ್ಥಿಕವಾಗಿ ಹಿಂದುಳಿದ ದೇಶಗಳ (ಗ್ಲೋಬಲ್‌ ಸೌತ್)‌ ದೃಷ್ಟಿಕೋನಗಳು ಮತ್ತು ಕಾಳಜಿಗಳನ್ನು ಎತ್ತಿ ಹಿಡಿಯಲು ಭಾರತ ನೀಡಿರುವ ಪ್ರಾಮುಖ್ಯತೆಯ ಬಗ್ಗೆ ಪ್ರಧಾನ ಮಂತ್ರಿ ಚಿನ್ಹ್ ಅವರಿಗೆ ವಿವರಿಸಿದರು.

******


(रिलीज़ आईडी: 1925982) आगंतुक पटल : 218
इस विज्ञप्ति को इन भाषाओं में पढ़ें: Gujarati , English , Urdu , हिन्दी , Marathi , Manipuri , Assamese , Bengali , Punjabi , Odia , Tamil , Telugu , Malayalam