ಪ್ರಧಾನ ಮಂತ್ರಿಯವರ ಕಛೇರಿ

ಬ್ರೆಜಿಲ್ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಸಭೆ

Posted On: 21 MAY 2023 9:29AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್‌ನ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು 21 ಮೇ 2023 ರಂದು ಹಿರೋಶಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಭೇಟಿ ಮಾಡಿದರು.

ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. ಈ ವರ್ಷ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75 ನೇ ವಾರ್ಷಿಕೋತ್ಸವವಾಗಿರುವುದನ್ನು ನಾಯಕರು ಗಮನಿಸಿದರು. ಅವರು ತಮ್ಮ ಕಾರ್ಯತಂತ್ರದ ಸಹಭಾಗಿತ್ವವನ್ನು ಪರಿಶೀಲಿಸಿದರು ಮತ್ತು ವಿಶೇಷವಾಗಿ ರಕ್ಷಣಾ ಉತ್ಪಾದನೆ, ವ್ಯಾಪಾರ, ಔಷಧೀಯ, ಕೃಷಿ, ಡೈರಿ ಮತ್ತು ಪಶುಸಂಗೋಪನೆ ಮತ್ತು ಜೈವಿಕ ಇಂಧನಗಳು ಮತ್ತು ಶುದ್ಧ ಇಂಧನ ಕ್ಷೇತ್ರಗಳಲ್ಲಿ ಅದನ್ನು ಇನ್ನಷ್ಟು ಗಾಢವಾಗಿಸುವ ಮಾರ್ಗಗಳನ್ನು ಚರ್ಚಿಸಿದರು. ಎರಡೂ ದೇಶಗಳ ಉದ್ಯಮಿಗಳ ಉನ್ನತ ಮಟ್ಟದ ಸಭೆಯನ್ನು ಆಯೋಜಿಸುವ ಅಗತ್ಯವನ್ನು ಇಬ್ಬರೂ ನಾಯಕರು ಒತ್ತಿ ಹೇಳಿದರು.

ಪ್ರಾದೇಶಿಕ ಬೆಳವಣಿಗೆಗಳ ಕುರಿತು ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಬಹುಪಕ್ಷೀಯ ವೇದಿಕೆಗಳಲ್ಲಿ ನಿರಂತರ ಸಹಕಾರದ ಪ್ರಾಮುಖ್ಯತೆ ಮತ್ತು ದೀರ್ಘಾವಧಿಯಲ್ಲಿ ಬಹುಪಕ್ಷೀಯ ಸಂಸ್ಥೆಗಳ ಸುಧಾರಣೆಯ ಅಗತ್ಯವನ್ನು ಅವರು ಒತ್ತಿ ಹೇಳಿದರು.

ವರ್ಷದ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿ-20 ಶೃಂಗಸಭೆಗಾಗಿ ಭಾರತದಲ್ಲಿ ಅಧ್ಯಕ್ಷ ಲೂಲಾ ಅವರನ್ನು ಸ್ವಾಗತಿಸಲು ಪ್ರಧಾನಮಂತ್ರಿಯವರು ಎದುರು ನೋಡುತ್ತಿದ್ದಾರೆ.

*******



(Release ID: 1926187) Visitor Counter : 106