ಪ್ರಧಾನ ಮಂತ್ರಿಯವರ ಕಛೇರಿ

ಗೋಪಾಲ ಕೃಷ್ಣ ಗೋಖಲೆ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

Posted On: 09 MAY 2023 9:07AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗೋಪಾಲ ಕೃಷ್ಣ ಗೋಖಲೆ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ;

"ಭಾರತದ ಸ್ವಾತಂತ್ರ್ಯ ಚಳವಳಿಯ ದಿಗ್ಗಜ ಗೋಪಾಲಕೃಷ್ಣ ಗೋಖಲೆ ಅವರ ಜನ್ಮ ಜಯಂತಿಯಂದು ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಶಿಕ್ಷಣ ಮತ್ತು ಸಾಮಾಜಿಕ ಸಬಲೀಕರಣವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಹಲವಾರು ಪ್ರಯತ್ನಗಳಲ್ಲಿ ಅವರು ಮುಂಚೂಣಿಯಲ್ಲಿದ್ದರು. ಅವರ ಆದರ್ಶಗಳು ಮಹಾತ್ಮ ಗಾಂಧಿ ಸೇರಿದಂತೆ ಹಲವಾರು ಜನರ ಮೇಲೆ ಪ್ರಭಾವ ಬೀರಿದವು."

 

****(Release ID: 1926213) Visitor Counter : 107