ಪ್ರಧಾನ ಮಂತ್ರಿಯವರ ಕಛೇರಿ
ಬೀಬಿನಗರದ ಏಮ್ಸ್ ನಲ್ಲಿ ಮೂಲಸೌಕರ್ಯ ವೃದ್ಧಿಯಿಂದ ತೆಲಂಗಾಣಕ್ಕೆ ಲಾಭ: ಪ್ರಧಾನಿ
Posted On:
06 APR 2023 4:49PM by PIB Bengaluru
ಬೀಬಿನಗರದಲ್ಲಿರುವ ಏಮ್ಸ್ ನಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸುವುದರಿಂದ ತೆಲಂಗಾಣಕ್ಕೆ ಲಾಭವಾಗಲಿದೆ ಮತ್ತು ಆರೋಗ್ಯಕರ ಭಾರತವನ್ನು ನಿರ್ಮಿಸುವ ನಮ್ಮ ನಿರಂತರ ಪ್ರಯತ್ನಗಳಿಗೆ ವೇಗ ಸಿಗಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಏಪ್ರಿಲ್ 8ರಂದು ಬೀಬಿನಗರದ ಏಮ್ಸ್ ನಲ್ಲಿ ಅತ್ಯಾಧುನಿಕ ಸೌಲಭ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ಸುಖ್ ಮಾಂಡವೀಯ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವರ ಟ್ವೀಟ್ ಗೆ ಪ್ರತ್ಯುತ್ತರವಾಗಿ ಪ್ರಧಾನಿ ಹೀಗೆ ಹೇಳಿದ್ದಾರೆ:
"ಬೀಬಿನಗರದ ಏಮ್ಸ್ನಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸುವುದರಿಂದ ತೆಲಂಗಾಣಕ್ಕೆ ಪ್ರಯೋಜನವಾಗಲಿದೆ ಮತ್ತು ಆರೋಗ್ಯಕರ ಭಾರತವನ್ನು ನಿರ್ಮಿಸುವ ನಮ್ಮ ನಿರಂತರ ಪ್ರಯತ್ನಗಳಿಗೆ ವೇಗ ದೊರೆಯಲಿದೆ".
***
(Release ID: 1926831)
Visitor Counter : 121
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam