ಪ್ರಧಾನ ಮಂತ್ರಿಯವರ ಕಛೇರಿ
ಮಹಿಳೆಯರ ಗೌರವ ಮತ್ತು ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ: ಪ್ರಧಾನಿ
Posted On:
03 APR 2023 9:56AM by PIB Bengaluru
ಮಹಿಳೆಯರ ಗೌರವ ಮತ್ತು ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಇಂಡಿಯಾ ಪೋಸ್ಟ್ ಪ್ರಾರಂಭಿಸಿದ "ಮಹಿಳಾ ಸಮ್ಮಾನ್ ಬಚತ್ ಪತ್ರ" ಇದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಶ್ರೀ ಮೋದಿ ಹೇಳಿದರು.
ಹಣಕಾಸು ಸಚಿವಾಲಯವು ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರಗಳು, 2023 ಗಾಗಿ ಗೆಜೆಟ್ ಅಧಿಸೂಚನೆಗಳನ್ನು ಹೊರಡಿಸಿದೆ ಮತ್ತು ತಕ್ಷಣದಿಂದ ಜಾರಿಗೆ ಬರುವಂತೆ 1.59 ಲಕ್ಷ ಅಂಚೆ ಕಚೇರಿಗಳಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. 'ಆಜಾದಿ ಕಾ ಅಮೃತ ಮಹೋತ್ಸವ್' ಸ್ಮರಣಾರ್ಥ ಕೇಂದ್ರ ಹಣಕಾಸು ಸಚಿವರು 2023-24ರ ಬಜೆಟ್ನಲ್ಲಿ ಈ ಯೋಜನೆಯನ್ನು ಘೋಷಿಸಿದರು ಮತ್ತು ಇದು ಬಾಲಕಿಯರು ಸೇರಿದಂತೆ ಮಹಿಳೆಯರ ಆರ್ಥಿಕ ಸೇರ್ಪಡೆ ಮತ್ತು ಸಬಲೀಕರಣಕ್ಕೆ ಮಹತ್ವದ ಹೆಜ್ಜೆಯಾಗಿದೆ.
ಇಂಡಿಯಾ ಪೋಸ್ಟ್ ನ ಟ್ವೀಟ್ ಥ್ರೆಡ್ ಗೆ ಉತ್ತರವಾಗಿ, ಪ್ರಧಾನಿ ಟ್ವೀಟ್ ಮಾಡಿದ್ದಾರೆ;
"ನಮ್ಮ ಸರ್ಕಾರವು ಮಹಿಳೆಯರ ಗೌರವ ಮತ್ತು ಸಬಲೀಕರಣಕ್ಕೆ ಬದ್ಧವಾಗಿದೆ ಮತ್ತು "ಮಹಿಳಾ ಸಮ್ಮಾನ್ ಬಚತ್ ಪತ್ರ" ಇದಕ್ಕೆ ಉತ್ತಮ ಉದಾಹರಣೆಯಾಗಿದೆ.
https://pib.gov.in/PressReleasePage.aspx?PRID=1912742"
***
(Release ID: 1926849)
Visitor Counter : 144
Read this release in:
Bengali
,
English
,
Urdu
,
Marathi
,
Hindi
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam