ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಸ್ವಾಯತ್ತ ಲ್ಯಾಂಡಿಂಗ್ ಮಿಷನ್ ನಡೆಸುತ್ತಿರುವ ಇಸ್ರೋವನ್ನು ಪ್ರಧಾನಿ ಶ್ಲಾಘಿಸಿದರು

प्रविष्टि तिथि: 02 APR 2023 8:18PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೋ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಸ್ವಾಯತ್ತ ಲ್ಯಾಂಡಿಂಗ್ ಮಿಷನ್ ನಡೆಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಡಿಆರ್ ಡಿಒ ಮತ್ತು ಭಾರತೀಯ ವಾಯುಪಡೆಯ ಸಹಯೋಗದೊಂದಿಗೆ ಇಸ್ರೋ ಏಪ್ರಿಲ್ 2, 2023 ರಂದು ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ಎಟಿಆರ್) ನಲ್ಲಿ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಸ್ವಾಯತ್ತ ಲ್ಯಾಂಡಿಂಗ್ ಮಿಷನ್ (ಆರ್ ಎಲ್ ವಿ ಲೆಕ್ಸ್) ಅನ್ನು ಯಶಸ್ವಿಯಾಗಿ ನಡೆಸಿತು.

ಇಸ್ರೋದ ಟ್ವೀಟ್ ಗೆ ಪ್ರತಿಕ್ರಿಯಿಸಿ, ಪ್ರಧಾನಿ ಟ್ವೀಟ್ ಮಾಡಿದ್ದಾರೆ;

"ಉತ್ತಮ ತಂಡದ ಪ್ರಯತ್ನ. ಈ ಸಾಧನೆಯು ಭಾರತೀಯ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನವನ್ನು ಸಾಕಾರಗೊಳಿಸಲು ನಮ್ಮನ್ನು ಒಂದು ಹೆಜ್ಜೆ ಹತ್ತಿರಕ್ಕೆ ಕರೆದೊಯ್ಯುತ್ತದೆ."

 


***


(रिलीज़ आईडी: 1926962) आगंतुक पटल : 179
इस विज्ञप्ति को इन भाषाओं में पढ़ें: Assamese , English , Urdu , Marathi , हिन्दी , Manipuri , Bengali , Punjabi , Gujarati , Odia , Tamil , Telugu , Malayalam