ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆ ಹಿನ್ನೆಲೆಯಲ್ಲಿ ಎಲ್ಲಾ ದೇಶವಾಸಿಗಳಿಗೆ ಅಭಿನಂದನೆಗಳು ಸಲ್ಲಿಸಿದ ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸ ಸಂಸತ್ ಭವನವನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ, ಈ ಕಟ್ಟಡವು ಜನರ ಆಕಾಂಕ್ಷೆಗಳನ್ನು ಈಡೇರಿಸುವ ಸ್ಥಳ ಮಾತ್ರವಲ್ಲದೆ ಅಮೃತಕಾಲ ಸಮಯದಲ್ಲಿ ಪ್ರತಿ ಕ್ಷೇತ್ರದಲ್ಲೂ ಭಾರತದ ಉತ್ಕೃಷ್ಟತೆಯ ಪ್ರಯಾಣದ ಆರಂಭಿಕ ಹಂತವಾಗಿದೆ.

ದಾಖಲೆ ಸಮಯದಲ್ಲಿ ಹೊಸ ಸಂಸತ್ ಭವನವನ್ನು ನಿರ್ಮಿಸುವ ರಾಷ್ಟ್ರದ ಕನಸನ್ನು ನನಸಾಗಿಸಿದ ಶ್ರಮ ಯೋಗಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ ಭವನದಲ್ಲಿ ಸೆಂಗೋಲ್ ಪ್ರತಿಷ್ಠಾಪನೆ ಮಾಡಿದ್ದು ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಪ್ರಸ್ತುತ ವ್ಯವಸ್ಥೆಯ ನಡುವಿನ ಸೇತುವೆಯಂತಾಗಿದೆ.

ಇದು ನಮ್ಮ ಶ್ರೀಮಂತ ಸಂಸ್ಕೃತಿಯಲ್ಲಿ ಸದಾಚಾರದ ಸದ್ಗುಣಗಳ ಪ್ರಾಮುಖ್ಯತೆಯನ್ನು ಮುಂದಿನ ಪೀಳಿಗೆಗೆ ಸಾರುವ ಬಹು ಮುಖ್ಯ ಪ್ರಕ್ರಿಯೆಯಾಗಿದೆ.

Posted On: 28 MAY 2023 3:30PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆ ಹಿನ್ನೆಲೆಯಲ್ಲಿ ಎಲ್ಲಾ ದೇಶವಾಸಿಗಳಿಗೆ ಅಭಿನಂದನೆಗಳು ಎಂದು ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ತಿಳಿಸಿದ್ದಾರೆ.

ಹೊಸ ಸಂಸತ್ ಭವನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ ಎಂದು ಶ್ರೀ ಅಮಿತ್ ಶಾ  ಹೇಳಿದ್ದಾರೆ. ಈ ಸಂಬಂಧ ಸಚಿವರು ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.

ಈ ಕಟ್ಟಡವು ಜನರ ಆಶೋತ್ತರಗಳನ್ನು ಈಡೇರಿಸುವ ಸ್ಥಳ ಮಾತ್ರವಲ್ಲದೆ ಅಮೃತ ಕಾಲದ ಸಮಯದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಭಾರತವನ್ನು ಶ್ರೇಷ್ಠತೆಯತ್ತ ಕೊಂಡೊಯ್ಯುವ ಪ್ರಯಾಣದ ಪ್ರಮುಖ ಹೆಜ್ಜೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.

ಹೊಸ ಸಂಸತ್ ಭವನವನ್ನು ದಾಖಲೆ ಸಮಯದಲ್ಲಿ ನಿರ್ಮಿಸುವ ರಾಷ್ಟ್ರದ ಕನಸನ್ನು ನನಸು ಮಾಡಿದ ಶ್ರಮ ಯೋಗಿಗಳ ಕಾಯಕಕ್ಕೆ ನಮನಗಳು ಎಂದು ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ ಭವನದಲ್ಲಿ ಸೆಂಗೋಲ್ ಸ್ಥಾಪನೆ ಮಾಡಿರುವುದು ಭಾರತದ ಭವ್ಯ ಸಾಂಸ್ಕೃತಿಕ ಪರಂಪರೆ ಮತ್ತು ಪ್ರಸ್ತುತಕ್ಕೆ ಸೇತುವೆಯಾಗಿ ರೂಪುಗೊಂಡಿದೆ. ಇದು ನಮ್ಮ ಶ್ರೀಮಂತ ಸಂಸ್ಕೃತಿಯ ಸದಾಚಾರದ ಸದ್ಗುಣಗಳ ಮಹತ್ವವನ್ನು ಮುಂದಿನ ಪೀಳಿಗೆಗೆ ಸಾರುತ್ತದೆ ಎಂದು ಶ್ರೀ ಅಮಿತ್ ಶಾ ಹೇಳಿದ್ದಾರೆ.

*****


(Release ID: 1927926) Visitor Counter : 147