ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕಾನ್ಪುರ ವಿಮಾನನಿಲ್ದಾಣದಲ್ಲಿ ನೂತನ‌ ವಿಸ್ತರಣಾ ಕಾರ್ಯದ ಉದ್ಘಾಟನೆಗೆ ಪ್ರಧಾನ ಮಂತ್ರಿ ಅಭಿನಂದನೆ

Posted On: 26 MAY 2023 9:36PM by PIB Bengaluru

 

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕನ್ಪುರ ವಿಮಾನ ನಿಲ್ದಾಣದ ನೂತನ ವಿಸ್ತರಣಾ ಕ್ರಮವು ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸುವ ಜತೆಗೆ ವಿಸ್ತರಣೆ ಅವಕಾಶಗಳನ್ನು ಒದಗಿಸುತ್ತದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

 ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನ ಮಂತ್ರಿಗಳು, "ಬಹಳ ಬಹಳ ಅಭಿನಂದನೆಗಳು. ಕಾನ್ಪುರ ವಿಮಾನ ನಿಲ್ದಾಣದಲ್ಲಿ ಸುಗಮ ವ್ಯವಸ್ಥೆ ಕಲ್ಪಿಸಲು ಕೈಗೊಂಡಿರುವ ವಿಸ್ತರಣಾ ಕ್ರಮಗಳಿಂದ ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸುವ ಜತೆಗೆ ಮತ್ತಷ್ಟು ಅನುಕೂಲಕರ ವ್ಯವಸ್ಥೆ ಕಲ್ಪಿಸಲು ಸಹಕಾರಿಯಾಗಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

***


(Release ID: 1928037) Visitor Counter : 119