ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮೈಸೂರು ಮತ್ತು ಧನ್ಬಾದ್ನಲ್ಲಿ ಸಂಭವಿಸಿದ ಅಪಘಾತಗದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ


ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ

Posted On: 29 MAY 2023 8:37PM by PIB Bengaluru

ಕರ್ನಾಟಕದ ಮೈಸೂರು ಮತ್ತು ಧನ್ಬಾದ್ ನಲ್ಲಿ ಸಂಭವಿಸಿದ ಅಪಘಾತಗದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿ ಶ್ರೀ ಮೋದಿಯವರು ಸಂತ್ರಸ್ತರಿಗೆ ಪರಿಹಾರ ಘೋಷಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

"ಕರ್ನಾಟಕದ ಮೈಸೂರಿನಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ತೀವ್ರ ದುಃಖವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ಅರ್ಪಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಾಂತ್ವನ ತಿಳಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ" ಎಂದು ಟ್ವೀಟ್ ಸಂದೇಶದಲ್ಲಿ ತಿಳಿಸಲಾಗಿದೆ.

"ಧನ್ಬಾದ್ ನಲ್ಲಿ ಸಂಭವಿಸಿದ ದುರಂತದಲ್ಲಿ ಹಲವರು ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಸಂದೇಶ ನೀಡಿದ್ದಾರೆ.

"ಮೈಸೂರು ಮತ್ತು ಧನ್ಬಾದ್ ನಲ್ಲಿ ಸಂಭವಿಸಿದ ದುರಂತಗಳಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬ ಸದಸ್ಯರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರಧಾನ ಮಂತ್ರಿ ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂಪಾಯಿಗಳನ್ನು ನೀಡಲಾಗುವುದು" ಎಂದು ಟ್ವೀಟ್ ಮಾಹಿತಿ ನೀಡಲಾಗಿದೆ.

***


(Release ID: 1928199) Visitor Counter : 141