ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಪುವಾ ನ್ಯೂ ಗಿನಿಯಾದ ಪೋರ್ಟ್ ಮೊರೆಸ್ಬಿಗೆ ಆಗಮಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 21 MAY 2023 8:06PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಮೇ 21ರ ಸಂಜೆ ಪೋರ್ಟ್ ಮೊರೆಸ್ಬಿಗೆ ಆಗಮಿಸಿದರು. ಪಪುವಾ ನ್ಯೂ ಗಿನಿಯಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಜೇಮ್ಸ್ ಮರಪೆ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದರು. 19 ಬಂದೂಕುಗಳ ಗೌರವ ವಂದನೆಯನ್ನು (ಗಾರ್ಡ್ ಆಫ್ ಹಾನರ್ ) ಪ್ರಧಾನಿ ಮೋದಿ ಅವರಿಗೆ ನೀಡಲಾಯಿತು.

ಪಪುವಾ ನ್ಯೂ ಗಿನಿಯಾಕ್ಕೆ ಭಾರತದ ಪ್ರಧಾನ ಮಂತ್ರಿಯೊಬ್ಬರು ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಭೇಟಿಯು ಪೆಸಿಫಿಕ್ ದ್ವೀಪ ರಾಷ್ಟ್ರಗಳೊಂದಿಗೆ ಭಾರತದ ನಿಕಟ ಬಾಂಧವ್ಯವನ್ನು ಒತ್ತಿಹೇಳುತ್ತದೆ.

****


(ಪ್ರಕಟಣೆ ಐ.ಡಿ.: 1928482) ವಿಸಿಟರ್ ಕೌಂಟರ್ : 183