ಪ್ರಧಾನ ಮಂತ್ರಿಯವರ ಕಛೇರಿ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

Posted On: 01 JUN 2023 10:27AM by PIB Bengaluru

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ರೈತರಿಗಾಗಿ 7 ಕಸ್ಟಮ್ ಹೈರಿಂಗ್ ಕೇಂದ್ರಗಳು, 9 ಪಾಲಿ ಗ್ರೀನ್ ಹೌಸ್ ಗಳು ಸೇರಿದಂತೆ ಹಲವಾರು ಪ್ರಮುಖ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಸರಣಿ ಟ್ವೀಟ್ ಸಂದೇಶಗಳನ್ನು ಹಂಚಿಕೊಳ್ಳುತ್ತಾ, ಪ್ರಧಾನಮಂತ್ರಿ ಈ ರೀತಿ ಟ್ವೀಟ್ ಮಾಡಿದ್ದಾರೆ;

"ಉದ್ಘಾಟನೆಗೊಂಡಿರುವ ಗಮನಾರ್ಹ ಶ್ರೇಣಿಯ ಅಭಿವೃದ್ಧಿ ಕಾರ್ಯಗಳು ಜಮ್ಮು ಮತ್ತು ಕಾಶ್ಮೀರದ ಜನರ, ವಿಶೇಷವಾಗಿ ಮಹತ್ವಾಕಾಂಕ್ಷೆಯ ಜಿಲ್ಲೆಗಳ ಜೀವನದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಸಾಕ್ಷಿಯಾಗಿವೆ."

 

*******

 



(Release ID: 1929030) Visitor Counter : 94