ಪ್ರಧಾನ ಮಂತ್ರಿಯವರ ಕಛೇರಿ
ರಾಜಸ್ಥಾನದ ಜುಂಜುನುವಿನಲ್ಲಿ ಟ್ರ್ಯಾಕ್ಟರ್ ಅಪಘಾತದಿಂದ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ
ಪಿಎಂಎನ್ಆರ್ ಎಫ್ ನಿಂದ ಪರಿಹಾರ ಘೋಷಣೆ
ಪ್ರಕಟಣಾ ದಿನಾಂಕ:
29 MAY 2023 11:10PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಜಸ್ಥಾನದ ಜುಂಜುನುವಿನಲ್ಲಿ ಸಂಭವಿಸಿದ ಟ್ರ್ಯಾಕ್ಟರ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.)ಯಿಂದ ಸಂತ್ರಸ್ತರಿಗೆ ಪರಿಹಾರ ಧನವನ್ನು ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿ ಕಚೇರಿ ಟ್ವೀಟ್ ಮಾಡಿದೆ.
"ರಾಜಸ್ಥಾನದ ಜುಂಜುನುವಿನಲ್ಲಿ ನಡೆದ ಟ್ರ್ಯಾಕ್ಟರ್ ಅಪಘಾತದಿಂದ ದುಃಖಿತನಾಗಿದ್ದೇನೆ. ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಮೃತರ ಕುಟುಂಬಗಳಿಗೆ ಪಿಎಂಎನ್ಆರ್ ಎಫ್ ನಿಂದ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ.ಪರಿಹಾರ ನೀಡಲಾಗುವುದು:ಪ್ರಧಾನಮಂತ್ರಿ,’’ ಎಂದು ತಿಳಿಸಿದೆ.
***
(ಪ್ರಕಟಣೆ ಐ.ಡಿ.: 1929283)
ವಿಸಿಟರ್ ಕೌಂಟರ್ : 136
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam