ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಒಡಿಶಾಗೆ ಭೇಟಿ ನೀಡಿದರು ಮತ್ತು ರೈಲು ಅಪಘಾತದ ನಂತರದ ರಕ್ಷಣಾ ಮತ್ತು ಪರಿಹಾರ ಪ್ರಯತ್ನಗಳನ್ನು ಪರಿಶೀಲಿಸಿದರು


ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬ ಸದಸ್ಯರೊಂದಿಗೆ ಸರ್ಕಾರ ನಿಂತಿದೆ: ಪ್ರಧಾನಮಂತ್ರಿ 

ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ವೈದ್ಯಕೀಯ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಯಾವುದೇ ಪ್ರಯತ್ನವನ್ನೂ ಕೈಬಿಡುವುದಿಲ್ಲ: ಪ್ರಧಾನಮಂತ್ರಿ 

ಈ ಬೃಹತ್ ದುರಂತದ ಪರಿಣಾಮವನ್ನು ಕಡಿಮೆಗೊಳಿಸಲು 'ಸಂಪೂರ್ಣ ಸರ್ಕಾರ'ದ ವಿಧಾನವನ್ನು ಬಳಸಿಕೊಳ್ಳಲು ಪ್ರಧಾನಮಂತ್ರಿ ಸೂಚಿಸಿದ್ದಾರೆ

ತ್ವರಿತ ತನಿಖೆಗಾಗಿ ಮತ್ತು ತಪ್ಪಿತಸ್ಥರ ವಿರುದ್ಧ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳಲು ಪ್ರಧಾನಮಂತ್ರಿ ಸೂಚನೆಗಳನ್ನು ನೀಡಿದ್ದಾರೆ

ಪರಿಹಾರ ಮತ್ತು ರಕ್ಷಣಾ ಕಾರ್ಯ ಜೊತೆಗೆ, ರೈಲ್ವೆ ಹಳಿಗಳ ತ್ವರಿತ ಮರುಸ್ಥಾಪನೆಯನ್ನು ಖಚಿತಪಡಿಸಿಕೊಳ್ಳಲು ತೀವ್ರಗತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ 

ಒಡಿಶಾ ಸರ್ಕಾರ, ಸ್ಥಳೀಯ ಆಡಳಿತ ಮತ್ತು ಸ್ಥಳೀಯ ಜನರು, ವಿಶೇಷವಾಗಿ ಯುವಕರು ಪರಿಹಾರ ಮತ್ತು ರಕ್ಷಣಾ ಪ್ರಯತ್ನಗಳನ್ನು ತ್ವರಿತವಾಗಿ ಕೈಗೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ಎಲ್ಲರನ್ನೂ ಶ್ಲಾಘಿಸಿದರು

Posted On: 03 JUN 2023 6:49PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾಗೆ ಭೇಟಿ ನೀಡಿದರು ಮತ್ತು ಬಾಲಸೋರ್‌ನಲ್ಲಿ ಸಂಭವಿಸಿದ ದುರಂತಮಯ ಬೃಹತ್ ರೈಲು ಅಪಘಾತದ ನಂತರದಲ್ಲಿ ನಡೆಯುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದರು.  

ರೈಲ್ವೇ ಅಪಘಾತ ಸ್ಥಳ ಮತ್ತು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪ್ರಧಾನಮಂತ್ರಿ ಅವರು ಭೇಟಿ ನೀಡಿದರು.

 ರೈಲುಗಳಲ್ಲಿ ಪ್ರಯಾಣಿಸುತ್ತಿದ್ದ ವಿವಿಧ ರಾಜ್ಯಗಳ ಜನರು ಈ ಬೃಹತ್ ದುರಂತದಿಂದ ಬಹಳಷ್ಟು ಪ್ರಭಾವಿತರಾಗಿದ್ದಾರೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.  

ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ವೈದ್ಯಕೀಯ ಸಹಾಯವನ್ನು ಒದಗಿಸಲು ಯಾವುದೇ ಪ್ರಯತ್ನವನ್ನೂ ಕೈಬಿಡುವುದಿಲ್ಲ ಎಂದು ದುರಂತದ ಜೀವಹಾನಿಯ ಬಗ್ಗೆ ಮಾತನಾಡುತ್ತಾ ಪ್ರಧಾನಮಂತ್ರಿ ಅವರು ಹೇಳಿದರು.  

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬದ ಸದಸ್ಯರೊಂದಿಗೆ ಸರ್ಕಾರ ನಿಂತಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

 ದುರಂತದ ಸರಿಯಾದ ಮತ್ತು ತ್ವರಿತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ತಪ್ಪಿತಸ್ಥರ ವಿರುದ್ಧ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. 

ಒಡಿಶಾ ಸರ್ಕಾರ, ಸ್ಥಳೀಯ ಆಡಳಿತ ಮತ್ತು ಸ್ಥಳೀಯ ಜನರ, ವಿಶೇಷವಾಗಿ ಯುವಕರ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ನಡೆಯುತ್ತಿರುವ ವಿವಿಧ ಪ್ರಯತ್ನಗಳಿಗೆ ಸಹಾಯ ಮಾಡಲು ರಾತ್ರಿಯಿಡೀ ಇವರೆಲ್ಲಾ ಕೆಲಸ ಮಾಡಿದರು.  ಗಾಯಾಳುಗಳಿಗೆ ಸಹಾಯ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಸ್ಥಳೀಯ ನಾಗರಿಕರನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.  

ರೈಲು ಹಳಿಗಳ ತ್ವರಿತ ಮರುಸ್ಥಾಪನೆಯನ್ನು ಖಚಿತಪಡಿಸಿಕೊಳ್ಳಲು,  ರಕ್ಷಣಾ ಕಾರ್ಯ ಮತ್ತು ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ರೈಲ್ವೆಯ ಅಧಿಕಾರಿಗಳು ಸರ್ವವಿಧದ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.  

ಸ್ಥಳೀಯ ಅಧಿಕಾರಿಗಳು, ವಿಪತ್ತು ಪರಿಹಾರ ಪಡೆಗಳ ಸಿಬ್ಬಂದಿ ಮತ್ತು ರೈಲ್ವೆ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಅವರು, ದುರಂತದ ಪರಿಣಾಮವನ್ನು ತಗ್ಗಿಸಲು 'ಸಂಪೂರ್ಣ ಸರ್ಕಾರ'ದ ವಿಧಾನವನ್ನು ಅನುಸರಿಸಲು ಸೂಚನೆ ನೀಡಿದರು.

****



(Release ID: 1929687) Visitor Counter : 125